ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಮಾಹಿತಿ, ಹುದ್ದೆಗಳ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಸೂಚನೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಎಲೆ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ವಿವರ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
Bengaluru Urban Gram Panchayat Recruitment 2024:
ಹುದ್ದೆ ಹೆಸರು : ಗ್ರಂಥಾಲಯ & ಮಾಹಿತಿ ಕೇಂದ್ರ ಮೇಲ್ವಿಚಾರಕರು
ಉದ್ಯೋಗದ ಸ್ಥಳ : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ
ಒಟ್ಟು ಹುದ್ದೆಗಳ ಸಂಖ್ಯೆ : 06
ಶೈಕ್ಷಣಿಕ ಅರ್ಹತೆ :
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪಾಸಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವಯಸ್ಸಿನ ಮೀತಿ :
ಅರ್ಜಿ ಸಲ್ಲಿಸುವ ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯೋಮಿತಿ ಕೆಳಗಿನಂತಿವೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ: 40 ವರ್ಷ
ವೇತನ ಶ್ರೇಣಿ:
ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15196.72 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ
ಮೆರಿಟ್ ಲಿಸ್ಟ್ ಮತ್ತು ರೋಸ್ಟರ್ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ಅಧಿಸೂಚನೆಯಲ್ಲಿ ನೀಡಲಾದ ವಿವಿಧ ಬೆಂಗಳೂರು ನಗರ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಅರ್ಜಿಯನ್ನು ತಲುಪಿಸಬೇಕು.
ಅರ್ಜಿ ಶುಲ್ಕ :
ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಜುಲೈ 25, 2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : 13- 082024
Bengaluru Urban Gram Panchayat Recruitment 2024 ಪ್ರಮುಖ ಲಿಂಕ್‌ಗಳು:
ಅರ್ಜಿ ನಮೂನೆ ಮತ್ತು ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: zpbengaluruurban.karnataka.gov.in