ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಖಾಲಿ ಇರುವ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ ವತಿಯಿಂದ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
BMRCL Assistant Security Officer Recruitment 2024
ಹುದ್ದೆಗಳ ಹೆಸರು: ಸಹಾಯಕ ಭದ್ರತಾ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ: 58
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು BMRCL ಅಧಿಸೂಚನೆ ಅನ್ವಯ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಸಹಾಯಕ ಭದ್ರತಾ ಅಧಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 62 ವರ್ಷ ಮೀರಿರಬಾರದು.
BMRCL Assistant Security Officer Recruitment 2024 ವೇತನ ಶ್ರೇಣಿ:
ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 30,000 ರಿಂದ 32,950 ರೂ. ವೇತನವನ್ನು ನೀಡಲಾಗುತ್ತದೆ.
ಇದನ್ನೂ ಓದಿ: ಅನ್ನ ಭಾಗ್ಯ ಫಲಾನುಭವಿಗಳಿಗೆ ಅಕ್ಕಿ ಜೊತೆಗೆ ಎಣ್ಣೆ, ಬೇಳೆ, ಸಕ್ಕರೆ ವಿತರಣೆ
ಅರ್ಜಿಶುಲ್ಕ:
ಅರ್ಜಿಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಯಾವುದೇ ಅರ್ಜಿಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ಕಾರ್ಯ ಅನುಭವದ ಆಧಾರದ ಮೇಲೆ ಶಾರ್ಟ್ಲಿಸ್ಟ್ ಮಾಡಿ. ನಂತರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅರ್ಜಿಯ ಹಾರ್ಡ್ ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
General Manager (HR),
Bangalore Metro Rail Corporation Limited,
III Floor, BMTC Complex, K.H. Road,
Shanthinagar, Bengaluru 560027.
ಇದನ್ನೂ ಓದಿ: ಬೆಳೆಹಾನಿ ಪರಿಹಾರ ಆಧಾರ್ ಲಿಂಕ್ ಆದ ರೈತರ ಪಟ್ಟಿ ಬಿಡುಗಡೆ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 13/08/2024
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/09/2024
ಆನ್ಲೈನ್ ಅರ್ಜಿ ಸಲ್ಲಿಸಿದ ಹಾರ್ಡ್ ಪ್ರತಿ ಕಳುಹಿಸಲು ಕೊನೆಯ ದಿನಾಂಕ: 13/09/2024
BMRCL Assistant Security Officer Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: english.bmrc.co.in
ಇದನ್ನೂ ಓದಿ: ಅಂಚೆ ಇಲಾಖೆಯಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ