BMRCL Recruitment 2024: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(Bengaluru Metro Rail Corporation Limited) ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (BMRCL) ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
BMRCL Recruitment 2024:
ಒಟ್ಟು ಹುದ್ದೆಗಳ ಸಂಖ್ಯೆ: 05
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ಹುದ್ದೆಗಳ ಮಾಹಿತಿ:
ಜನರಲ್ ಮ್ಯಾನೇಜರ್ (ಕಾಂಟ್ರ್ಯಾಕ್ಟ್/ಸ್ಟೋರ್ಸ್): 02
ಜನರಲ್ ಮ್ಯಾನೇಜರ್ (ಟ್ರ್ಯಾಕ್ಶನ್):01
ಜನರಲ್ ಮ್ಯಾನೇಜರ್ (P-ವೇ): 01
ಜನರಲ್ ಮ್ಯಾನೇಜರ್ (ಸಿಗ್ನಲಿಂಗ್): 01
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಮೆಕ್ಯಾನಿಕಲ್/ ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ ಪೂರ್ಣಗೊಳಿಸರಬೇಕು.
ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 58 ವರ್ಷ ಮೀರಿರಬಾರದು.
ವೇತನ ಶ್ರೇಣಿ:
BMRCL ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 2,06,250 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿ ಹಾರ್ಡ್ ಪ್ರತಿ ಮತ್ತು ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಸೆಪ್ಟೆಂಬರ್ 30ರೊಳಗೆ ಕಳುಹಿಸಬೇಕು.
ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಹೊಸ ಅಪ್ಡೇಟ್!
ಅರ್ಜಿ ಸಲ್ಲಿಸುವ ವಿಳಾಸ:
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ BMTC ಕಾಂಪ್ಲೆಕ್ಸ್
K.H. ರಸ್ತೆ ಶಾಂತಿನಗರ
ಬೆಂಗಳೂರು-560027
ಇದನ್ನೂ ಓದಿ: SEBI ಸಂಸ್ಥೆಯಲ್ಲಿ ಉದ್ಯೋಗ ವೇತನ 70 ಸಾವಿರ ರೂ. ವೇತನ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 31/08/2024
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/09/ 2024
ಆಫ್ಲೈನ್ ಅರ್ಜಿ ಹಾರ್ಡ್ ಪ್ರತಿ ಸಲ್ಲಿಸಲು ಕೊನೆಯ ದಿನಾಂಕ: 30/09/ 2024
BMRCL Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: bmrc.co.in
ಇದನ್ನೂ ಓದಿ: ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು 30,ಸಾವಿರ ರೂ. ಸಹಾಯಧನ