ರೈತರಿಗೆ ಗುಡ್ ನ್ಯೂಸ್ ಅಕ್ರಮ ಕೃಷಿಯ ಪಂಪ್ ಸೆಟ್ ಸಕ್ರಮ ಯೋಜನೆಗೆ ಮರು ಜಾರಿ ಸಿಎಂ | Farmers the Illegal Agricultural Pump Sets Scheme

WhatsApp Group Join Now
Telegram Group Join Now

Farmers the Illegal Agricultural Pump Sets Scheme: ರಾಜ್ಯದ ರೈತರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತ ವರ್ಗದ ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿದರು. ಈ ವೇಳೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ:
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತರಿಗೆ ವೃತ್ತಿಯ ಮೇಲೆ ನಿರಂತರ ಶಂಕೆ ಮೂಡಿಸುತ್ತಿದ್ದು, ಭೂ ಸುಧಾರಣಾ ಕಾಯ್ದೆಯನ್ನು ತಕ್ಷಣ ರದ್ದುಗೊಳಿಸುವಂತೆ ಸಿದ್ಧರಾಮಯ್ಯ ನವರಿಗೆ ಒತ್ತಾಯಿಸಿದರು.

ಅಕ್ರಮ ಪಂಪ್ ಸೆಟ್ ಸಕ್ರಮ ಯೋಜನೆ:
ರೈತರು ಅಕ್ರಮ ಪಂಪ್ ಸೆಟ್ ಗಳನ್ನು ಕಾನೂನು ಬಾಹ್ಯವಾಗಿ ಬಳಸುತ್ತಿರುವುದು ಅನೇಕ ಸಮಸ್ಯೆಗಳ ಮೂಲವಾಗಿದೆ. ಹಾಗೂ RR ನಂಬರ್‌ ಗೆ ಆಧಾ‌ರ್ ಸಂಖ್ಯೆ ಜೋಡಣೆ ಕಾರ್ಯವನ್ನು (Aadhar link) ತಕ್ಷಣ ನಿಲ್ಲಿಸುವಂತೆ ಅವರು ಮನವಿ ಮಾಡಿದರು.

ಸಾಲಗಳ ಸಮಸ್ಯೆ:
ಕೃಷಿ ಸಾಲ ಮರುಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್ ನಿರ್ಮಾಣ ಕಾಯ್ದೆ ರದ್ದು ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಖಾಸಗಿ ಫೈನಾನ್ಸ್, ಬ್ಯಾಂಕ್ ಸಾಲ ವಸೂಲಿ ನೆಪದಲ್ಲಿ ರೈತರಿಗೆ ಕಿರುಕುಳ ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು.

ವಿಪತ್ತು ಪರಿಹಾರ:
ಕೃಷಿರ ಜೀವನದಲ್ಲಿ ಬರುವ ಪ್ರಮುಖ ತೊಂದರೆ ಎಂದರೆ ಬರ, ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳ ಅನ್ವಯ ಪರಿಹಾರ ಕೊಡಬೇಕು.

ಜಮೀನು ಹಿಂಪಡೆಯಲು ಸೂಚನೆ:
ಸರ್ಕಾರದ ನಿರ್ಧಾರದಿಂದ ಜಿಂದಾಲ್ ಕಂಪನಿಗೆ (Jindal Company) ನೀಡಿದ 3667 ಎಕರೆ ಜಮೀನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಒತ್ತಾಯಿಸಿದ್ದಾರೆ.

ಮುಖ್ಯ ಮಂತ್ರಿ ಆಶ್ವಾಸನೆ:
ರೈತರ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಗದ ಮನವಿಯನ್ನು ಆಲಿಸಿದ, ಅಕ್ರಮ ಕೃಷಿಯ ಪಂಪ್ ಸೆಟ್ ಗಳ ಸಕ್ರಮದ ಯೋಜನೆಯನ್ನು ಮರು ಜಾರಿಯನ್ನು ಸೇರಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಆದ್ಯತೆಗಳ ಮೇರೆಗೆ ಪರಿಹಾರವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net