Anna Bhagya Scheme New Update: ಅನ್ನಭಾಗ್ಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಅಕ್ಕಿ ಜೊತೆಗೆ ಆಹಾರ ಕಿಟ್ ವಿತರಣೆ ಮಾಡಲು ಸರ್ಕಾರ ಮುಂದಾಗಿರುವುದಾಗಿ ಆಹಾರ ಸಚಿವರು ಸುಳಿವು ನೀಡಿದ್ದಾರೆ.
Anna Bhagya Scheme
ಅನ್ನಭಾಗ್ಯ ಯೋಜನೆಯಿಂದಾಗಿ ರಾಜ್ಯದ ಲಕ್ಷಾಂತರ ಬಡ ಕುಟುಂಬಗಳಿಗೆ ಲಾಭವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಬಡ ಕುಟುಂಬದವರಿಗೆ ಉಚಿತವಾಗಿ 5 ಕೆಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ಒಬ್ಬರಿಗೆ 170 ರೂ. ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗುತ್ತಿತ್ತು.
ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ ರೇಷನ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿತ್ತು. ಆದರೆ ಇನ್ಮುಂದೆ ಹಣದ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ವಿವಿಧ ಆಹಾರ ಧಾನ್ಯ ಕಿಟ್ ವಿತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪನವರೇ ತಿಳಿಸಿದ್ದಾರೆ.
ಅಕ್ಟೋಬರ್ 28 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ (ಆಹಾರ ಧಾನ್ಯ ಕಿಟ್ ವಿತರಣೆ) ಅನುಮೋದನೆ ಪಡೆಯಲಾಗುತ್ತದೆ. ಅದಾದ ಬಳಿಕ ಅನ್ನಭಾಗ್ಯ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಜೊತೆಗೆ ಎಣ್ಣೆ, ಬೇಳೆಯನ್ನೊಳಗೊಂಡ ಆಹಾರ ಕಿಟ್ ಬಗ್ಗೆ ಘೋಷಣೆ ಮಾಡಲಾಗುತ್ತದೆ. ಆಹಾರ ಧಾನ್ಯ ಕಿಟ್ ವಿತರಣೆ ಪ್ರಾರಂಭದ ನಂತರ ಅಕ್ಕಿ ಬದಲಿಗೆ ನೀಡುತ್ತಿದ್ದ ಹಣ ಕ್ರೆಡಿಟ್ ಆಗುವುದು ಬಂದ್ ಆಗಲಿದ್ದು ಅದರ ಬದಲಿಗೆ ಆಹಾರ್ ಕಿಟ್ ಸಿಗುವಂತಾಗಲಿದೆ.
ಶೀಘ್ರ ಬಾಕಿ ಹಣ ಬಿಡುಗಡೆ:
5 ಕೆ.ಜಿ ಅಕ್ಕಿಯ ಬದಲಿಗೆ ರೇಷನ್ ಕಾರ್ಡ್‌ದಾರರ ಖಾತೆಗೆ ಡಿಬಿಟಿಯ ಮೂಲಕ ಪ್ರತಿಯೊಬ್ಬರಿಗೆ ತಲಾ 170 ರೂ. ಹಣ ಕೊಡುತ್ತಿದೆ. ಆದರೆ, ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಇನ್ನೂ ಬಾಕಿ ಇದು. ಶೀಘ್ರವೇ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವುದಾಗಿ ರಾಜ್ಯ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
ಮಹಿಳೆಯರಿಗೆ 3 ಲಕ್ಷ ರೂ. ಬಡ್ಡಿ ರಹಿತ ಸಾಲ ಯೋಜನೆಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಈ ಯೋಜನೆಯಡಿ ರೈತರಿಗೆ ಪ್ರತಿ ತಿಂಗಳು 3000 ರೂ. ಇಗಲೇ ಅಪ್ಲೈ ಮಾಡಿ.
ಆಧಾರ್ ಕಾರ್ಡ್ ನಲ್ಲಿ ಪೋಟೋ, ಹೆಸರು, ವಿಳಾಸ, ತಿದ್ದುಪಡಿ ಮಾಡಲು ಮತ್ತೆ ದಿನಾಂಕ ವಿಸ್ತರಣೆ