ಜಿಲ್ಲಾ ಆಯುಷ್ ಇಲಾಖೆ ನೇಮಕಾತಿ | Ayush Department Kolar Recruitment 2024

WhatsApp Group Join Now
Telegram Group Join Now

ಕೋಲಾರ ಜಿಲ್ಲಾ ಆಯುಷ್ ಕಛೇರಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹೋಮಿಯೋಪತಿ ಆಸ್ಪತ್ರೆಯಲ್ಲಿ ಖಾಲಿ ಇರುವ ಹೋಮಿಯೋಪತಿ ಸ್ಪೆಷಲಿಸ್ಟ್‌ ಡಾಕ್ಟರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೋಲಾರ ಜಿಲ್ಲಾ ಆಯುಷ್ ಕಛೇರಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Ayush Department Kolar Recruitment 2024

ಹುದ್ದೆ : ಹೋಮಿಯೋಪತಿ ತಜ್ಞ ವೈದ್ಯರು

ಉದ್ಯೋಗದ ಸ್ಥಳ : ಕೋಲಾರ (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ : 01

ಶೈಕ್ಷಣಿಕ ಅರ್ಹತೆ:
ಎಂ.ಎಸ್/ ಎಂ.ಡಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ, ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಬಿ.ಹೆಚ್.ಎಂ.ಎಸ್(BHMS) ಪದವಿಯನ್ನು ಪರಿಗಣಿಸಲಾಗುವುದು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು.
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ: 38 ವರ್ಷ
SC/ST ಪ್ರವರ್ಗ-I ಅಭ್ಯರ್ಥಿಗಳಿಗೆ ಗರಿಷ್ಠ: 40 ವರ್ಷ

Ayush Department Kolar Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 52,550 ವೇತನ +5,000 ಭತ್ಯೆಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಮೆರಿಟ್ ಪಟ್ಟಿ, ಕಾರ್ಯಾನುಭವ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಆಯುಷ್ ಅಧಿಕಾರಿಗಳು,
ಜಿಲ್ಲಾ ಆಯುಷ್ ಕಛೇರಿ,
ಎಸ್.ಎನ್.ಆರ್ ಆಸ್ಪತ್ರೆ ಆವರಣ,
ಕೋಲಾರ – 563101

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಅಕ್ಟೋಬರ್ 30, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 30, 2024

Ayush Department Kolar Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅಪ್ಲಿಕೇಶನ್ ಫಾರ್ಮ್ : ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: kolar.nic.in

ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಉದ್ಯೋಗ 1,12,900 ರೂ. ವೇತನ

ಹುಬ್ಬಳ್ಳಿಯ ನೈಋತ್ಯ ರೈಲ್ವೆಯಲ್ಲಿ ಉದ್ಯೋಗ SSLC, PUC ಪಾಸಾದವರು ಅರ್ಜಿ ಸಲ್ಲಿಸಿ

DCC ಬ್ಯಾಂಕ್ ನೇಮಕ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net