Mini tractor subsidy : ಶೇ 90% ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ

WhatsApp Group Join Now
Telegram Group Join Now

ಕರ್ನಾಟಕ ಸರಕಾರದ ಕೃಷಿ ಇಲಾಖೆಯ ವತಿಯಿಂದ ಕೃಷಿ ಯಾಂತ್ರೀಕರಣ (Agricultural machinery) ಯೋಜನೆಯಡಿ ರೈತರಿಗೆ ಕಡಿಮೆ ವೆಚ್ಚದಲ್ಲಿ ಮಿನಿ ಟ್ರ್ಯಾಕ್ಟರ್(Mini tractor subsidy) ಸೇರಿದಂತೆ ವಿವಿಧ ಕೃಷಿ ಯಂತ್ರೋಪಕರಣಗಳ ಖರೀದಿಗೆ ಅರ್ಹ ರೈತರಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ 2024-25 ನೇ ಸಾಲಿನ ಕೃಷಿ ಇಲಾಖೆಯಿಂದ ರೈತರಿಗೆ ಉಪಯುಕ್ತವಾಗುವ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇಕಡಾ.50% ರಷ್ಟು ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ (SC/ST) ರೈತರಿಗೆ ಶೇ.90 ರ ರಿಯಾಯಿತಿ (ಸಬ್ಸಿಡಿ) ಯಲ್ಲಿ ಈ ಕೆಳಗಿನ ಉಪಕರಣಗಳನ್ನು ವಿತರಿಸಲಾಗುತ್ತದೆ.

ಈ ಯೋಜನೆಯ ಪ್ರಯೋಜನಗಳು?:
ಇವತ್ತಿನ ದಿನಮಾನದಲ್ಲಿ ಕೃಷಿಯಲ್ಲಿ ಕೂಲಿ-ಕಾರ್ಮಿಕರ ಕಾರ್ಮಿಕರ ಕೊರತೆಯನ್ನು ತಗ್ಗಿಸಲು, ಕೃಷಿಯಲ್ಲಿ ಯಂತ್ರೋಪಕರಣಗಳ (Agriculture machineries) ಬಳಕೆ ಅನಿವಾರ್ಯವಾಗಿದೆ. ಕೃಷಿ ಯಾಂತ್ರೀಕರಣದಿಂದ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಕೈಗೊಳ್ಳಲು, ಕೃಷಿ ವೆಚ್ಚವನ್ನು ಕಡಿಮೆ ಮಾಡಲು, ಕೃಷಿ ವಿದ್ಯುತ್ ಲಭ್ಯತೆಯನ್ನು ಹೆಚ್ಚಿಸಲು, ಕೃಷಿಯಲ್ಲಿ ಯುವಕರನ್ನು ಆಕರ್ಷಿಸಲು ಮತ್ತು ಇತ್ತೀಚಿನ ತಂತ್ರಜ್ಞಾನಗಳನ್ನು ಪರಿಚಯಿಸಲು ಪ್ರಮುಖ ಪಾತ್ರ ವಹಿಸುತ್ತದೆ.

Mini tractor subsidy ಕೃಷಿ ಉಪಕರಣಗಳು:

ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್‍ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಕೃಷಿ ಸಂಬಂಧಿಸಿದ ಹೈಟೆಕ್ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ.90ರ ಸಬ್ಸಿಡಿ ದರದಲ್ಲಿ ತುಂತುರು ನೀರಾವರಿ ಘಟಕ (sprinkler set subsidy) ವನ್ನು (ಹೆಚ್‍ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ.

ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು:
ಅರ್ಜಿ ನಮೂನೆ(ರೈತ ಸಂಪರ್ಕ ಕೇಂದ್ರದಲ್ಲಿ ಪಡೆದು) ಜಮೀನಿನ ಪಹಣಿ/ಊತಾರ್/RTC
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
ಎರಡು ಪೋಟೋ
ಹಿಡುವಳಿ ಪ್ರಮಾಣ ಪತ್ರ
ರೇಶನ್ ಕಾರ್ಡ
100 ರೂ ಬಾಂಡ್ ಪೇಪರ್

ಈ ಮೇಲಿನ ಎಲ್ಲಾ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಕೃಷಿ ಹೊಂಡ ಯೋಜನೆ:
ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ಕೃಷಿ ಭೂಮಿಯಲ್ಲಿ ನೀರು ಸಂಗ್ರಹಣೆಗೆ (ಕೃಷಿ ಹೊಂಡ), ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಹಾಕಲು, ಹೊಂಡದಿಂದ ನೀರು ಎತ್ತಲು ಡೀಸೆಲ್/ ಸೋಲಾರ್ ಪಂಪ್ ಸೆಟ್(ಗರಿಷ್ಠ 10 ಹೆಚ್‍ಪಿ) ಮತ್ತು ಬೆಳೆಗೆ ನೀರು ಹಾಯಿಸಲು ಸೂಕ್ಷ್ಮ ನೀರಾವರಿ ಘಟಕಗಳ ಸೌಲಭ್ಯಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ.80 ರಷ್ಟು ಸಹಾಯಧನದಲ್ಲಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಮಾನದಂಡಗಳು:
ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೇ ನಂಬರ್‍ನಲ್ಲಿ ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು.
ಹಿಂದಿನ ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಾವುದೇ ಯೋಜನೆಯಡಿ ಕೃಷಿ ಹೊಂಡ ಯೋಜನೆ ಲಾಭವನ್ನು ಪಡೆದಿರುವ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲಾ. (ಕೆ ಕಿಸಾನ್ ಪೋರ್ಟಲ್‍ನಲ್ಲಿ ಭೌತಿಕವಾಗಿ ಸ್ಥಳ ಪರಿಶೀಲಿಸಿ ಖಾತರಿಪಡಿಸಿಕೊಳ್ಳುವುದು).

Mini tractor subsidy ಹೆಚ್ಚಿನ ಮಾಹಿತಿಗಾಗಿ:
ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಹೆಚ್ಚಿನ ವಿವರಗಳನ್ನು ಪಡೆಯಬಹುದು ಎಂದು ಕೃಷಿ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೂರವಾಣಿ ಸಂಖ್ಯೆ: 08022074103 080-22242746

ಮಹಿಳೆಯರಿಗೆ 3 ಲಕ್ಷ ರೂ. ಬಡ್ಡಿ ರಹಿತ ಸಾಲ ಯೋಜನೆಗೆ ಅರ್ಜಿ ಆಹ್ವಾನ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net