ಕೇಂದ್ರ ಗೃಹ ಇಲಾಖೆಯಲ್ಲಿ ಅಡಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿಯಿರುವ ಇನ್‌ಸ್ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಫ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆಯ (National Investigation Agency) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
NIA Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 164
ಹುದ್ದೆಗಳ ಹೆಸರು : ಇನ್ಸ್‌ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್
ಉದ್ಯೋಗದ ಸ್ಥಳ : ಭಾರತದಾದಂತ್ಯ
ಹುದ್ದೆಗಳ ವಿವರ:
ಇನ್ಸ್‌ಪೆಕ್ಟರ್: 55
ಸಬ್ ಇನ್ಸ್‌ಪೆಕ್ಟರ್: 64
ಸಹಾಯಕ ಸಬ್ ಇನ್ಸ್‌ಪೆಕ್ಟರ್: 40
ಹೆಡ್ ಕಾನ್ಸ್ಟೇಬಲ್: 05
ಶೈಕ್ಷಣಿಕ ಅರ್ಹತೆ:
ಎನ್‌ಐಎ ಅಧಿಸೂಚನೆ ಪ್ರಕಾರ ಇನ್ಸ್ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸರಬೇಕು. ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವೀತಿಯ ಪಿಯುಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ :
ರಾಷ್ಟ್ರೀಯ ತನಿಖಾ ಸಂಸ್ಥೆ ಮಾನದಂಡಗಳ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
NIA Recruitment 2024 ವೇತನ ಶ್ರೇಣಿ:
ಇನ್ಸ್‌ಪೆಕ್ಟರ್ : 44,900-1,42,400 ರೂ.
ಸಬ್ ಇನ್ಸ್‌ಪೆಕ್ಟರ್ : 35,400-1,12,400 ರೂ.
ಸಹಾಯಕ ಸಬ್ ಇನ್ಸ್‌ಪೆಕ್ಟರ್ : 29,200-92,300 ರೂ.
ಹೆಡ್ ಕಾನ್ಸ್ಟೇಬಲ್ : 25,500-81,700 ರೂ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿರುವ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಈ ಅರ್ಜಿ ನಮೂನೆಯನ್ನು ಮೂಲ ದಾಖಲೆಗಳೊಂದಿಗೆ ಸಂಬಂಧಿತ ಸ್ವಯಂ-ದೃಢೀಕರಿಸಿದ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
SP (Adm), NIA HQ,
CGO ಕಾಂಪ್ಲೆಕ್ಸ್ ಎದುರು,
ಲೋಧಿ ರಸ್ತೆ, ನವದೆಹಲಿ-110003
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ : 11 ನವೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಡಿಸೆಂಬರ್, 2024
NIA Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: nia.gov.in
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಲೈಬ್ರೇರಿಯನ್ ಹುದ್ದೆಗಳ ನೇಮಕಾತಿ 2024
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕ್ಲರ್ಕ್ ಹುದ್ದೆಗಳ ನೇಮಕಾತಿ 2024