ಕೇಂದ್ರ ರೇಷ್ಮೆ ಮಂಡಳಿ (CSB Recruitment 2024) ಇಲಾಖೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ (Computer Operator) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡುವ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆ ಹೆಸರು: ಕಂಪ್ಯೂಟರ್ ಆಪರೇಟರ್
ಒಟ್ಟು ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ; ಬೆಂಗಳೂರು (ಕರ್ನಾಟಕ)
CSB Recruitment 2024 ವಿದ್ಯಾರ್ಹತೆ:
ಕೇಂದ್ರ ರೇಷ್ಮೆ ಮಂಡಳಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ (ಪಿಯುಸಿ) 12ನೇ ತರಗತಿಯನ್ನು ಉತ್ತೀರ್ಣರಾಗಿಬೇಕು.
ವಯೋಮಿತಿ:
ಸೆಂಟ್ರಲ್ ಸಿಲ್ಕ್ ಬೋರ್ಡ್ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳನ್ನು ಮೀರಿರಬಾರದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಅಧಿಸೂಚನೆ ಮಾನದಂಡಗಳ ಪ್ರಕಾರ, ಪ್ರತಿ ತಿಂಗಳು 25,000 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ನೇರ ಸಂದರ್ಶನಕ್ಕೆ ಆಹ್ವಾನಿಸಿದ್ದು ಅಭ್ಯರ್ಥಿಗಳನ್ನು ಸಂದರ್ಶನ (Walk-in Interview) ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನದ ವಿಳಾಸ:
ಕೇಂದ್ರೀಯ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ, ಕೇಂದ್ರ ರೇಷ್ಮೆ ಮಂಡಳಿ ಜವಳಿ ಸಚಿವಾಲಯ, ಭಾರತ ಸರ್ಕಾರ, CSB ಕಾಂಪ್ಲೆಕ್ಸ್, BTM ಲೇಔಟ್, ಮಡಿವಾಳ, ಬೆಂಗಳೂರು – 560068, ಕರ್ನಾಟಕ.
CSB Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 28/11/2024
ನೇರ ಸಂದರ್ಶನದ ದಿನಾಂಕ: 09 ಡಿಸೆಂಬರ್ 2024 ಬೆಳಗ್ಗೆ 10:00 AM
ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: csb.gov.in
ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಚಾಲಕರು & ತಾಂತ್ರಿಕ ಸಹಾಯಕರು ಹುದ್ದೆಗಳ ನೇಮಕಾತಿ
ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿ 2024