ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆಗಳು) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI Recruitment 2024-2025) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್ (Fire Services)
ಒಟ್ಟು ಹುದ್ದೆಗಳ ಸಂಖ್ಯೆ: 89
ಉದ್ಯೋಗದ ಸ್ಥಳ: ಭಾರತದಾದ್ಯಂತ
AAI Recruitment 2024-2025 ಶೈಕ್ಷಣಿಕ ವಿದ್ಯಾರ್ಹತೆ:
ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Airports Authority of India) ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಯಿಂದ 10 ನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಮಾಸಿಕ ವೇತನ:
ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಮಾನದಂಡಗಳ ಪ್ರಕಾರ ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 31,000 ರಿಂದ 92,000 ರೂ. ರವರೆಗೆ ಸಂಬಳವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಜನರಲ್, ಇಡಬ್ಲುಎಸ್, ಒಬಿಸಿ ಅಭ್ಯರ್ಥಿಗಳು: 1,000 ರೂ.
ಎಸ್ಸಿ, ಎಸ್ಟಿ, ವಿಶೇಷ ಚೇತನ ಅಭ್ಯರ್ಥಿಗಳು: ವಿನಾಯಿತಿ ನೀಡಲಾಗಿದೆ.
ವಯೋಮಿತಿ:
ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಅಧಿಸೂಚನೆ ಮಾನದಂಡಗಳ ಪ್ರಕಾರ ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷದೊಳಗೆ ಇರಬೇಕು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ (CBT) ಪರೀಕ್ಷೆ, ದೈಹಿಕ ಮಾನದಂಡ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ನೋಟಿಫಿಕೆಶನ್ ಬಿಡುಗಡೆಯಾದ ದಿನಾಂಕ:19 ಡಿಸೆಂಬರ್ 2024
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 30 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಜನವರಿ 2025
AAI Recruitment 2024-2025 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: aai.aero
ಕೊಚ್ಚಿಯ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ 2024
ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಉದ್ಯೋಗ 1 ಲಕ್ಷಕ್ಕೂ ಅಧಿಕ ವೇತನ