ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಲ್ಲಿ (AHVS) ಖಾಲಿ ಇರುವ ಪಶು ವೈದ್ಯಾಧಿಕಾರಿ (Veterinary Officers) ಹುದ್ದೆಗಳನ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ (Animal Husbandry & Veterinary Services Karnataka) (ಎಎಚ್ವಿಎಸ್) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 120
ಹುದ್ದೆಗಳ ಹೆಸರು: ಪಶು ವೈದ್ಯಾಧಿಕಾರಿ
ಉದ್ಯೋಗದ ಸ್ಥಳ: ಕರ್ನಾಟಕ
AHVS Recruitment 2024 ವಿದ್ಯಾರ್ಹತೆ:
ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದಿಂದ ಬಿವಿಎಸ್ಸಿ, ಬಿವಿಎಸ್ಸಿ ಅಂಡ್ ಎಹೆಚ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು.
ಗರಿಷ್ಠ ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
SC/ST ಮತ್ತು ಪ್ರವರ್ಗ-I ರ ಅಭ್ಯರ್ಥಿಗಳಿಗೆ: 40 ವರ್ಷ
ವೇತನ ಶ್ರೇಣಿ:
ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಅಧಿಸೂಚನೆ ಪ್ರಕಾರ, ಪಶು ವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ 52,640 ರೂ. ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಪಡೆದಿರುವ ವಿದ್ಯಾರ್ಹತೆ (B.V.SC/ B.V.SC ಮತ್ತು AH ಪದವಿಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ಲಿಂಕ್‌ಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 16 ಡಿಸೆಂಬರ್, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 25, 2024
AHVS Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ahvs.karnataka.gov.in
ಇದನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ 2024
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 1036 ಹುದ್ದೆಗಳ ನೇಮಕಾತಿ ಪಿಯುಸಿ, ಪದವಿ ಪಾಸಾದವರು ಅರ್ಜಿ ಸಲ್ಲಿಸಿ