ಪದವಿ ಪಾಸಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ (Punjab And Sind Bank Recruitment 2025) ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ ಅಗತ್ಯ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿಗೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ ಅಗತ್ಯ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Punjab And Sind Bank Recruitment 2025
ಹುದ್ದೆ : ಸ್ಥಳೀಯ ಬ್ಯಾಂಕ್ ಅಧಿಕಾರಿ (Local Bank Officers)
ಕೆಲಸದ ಸ್ಥಳ : ಕರ್ನಾಟಕ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ.
ಒಟ್ಟು ಹುದ್ದೆಗಳ ಸಂಖ್ಯೆ : 110 ಹುದ್ದೆಗಳ
ಹುದ್ದೆಗಳ ಸಂಖ್ಯೆ:
ಅರುಣಾಚಲ ಪ್ರದೇಶ: 05
ಆಸ್ಸಾಂ: 10
ಗುಜರಾತ್: 30
ಕರ್ನಾಟಕ: 10
ಮಹಾರಾಷ್ಟ್ರ: 30
ಪಂಜಾಬ್: 25
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕ 01/02/2025ಕ್ಕೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ: 05 ವರ್ಷ
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: 03 ವರ್ಷ
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: 10 ವರ್ಷ
ವೇತನ:
ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 48,480 ರಿಂದ 85,920 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು: ರೂ. 100
ಸಾಮಾನ್ಯ, ಒಬಿಸಿ, EWS ಅಭ್ಯರ್ಥಿಗಳು: ರೂ. 850
ಶುಲ್ಕ ಪಾವತಿಸುವ ವಿಧಾನ: ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಈ ಸುದ್ದಿಯನ್ನೂ ಓದಿ: PUC, ಪದವಿ, ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸ್ಕ್ರೀನಿಂಗ್, ಸಂದರ್ಶನ ಮತ್ತು ಭಾಷಾ ಪ್ರಾವಿಣ್ಯತೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು: ಕರ್ನಾಟಕದಲ್ಲಿ (ಬೆಂಗಳೂರು, ಮೈಸೂರು).
Punjab And Sind Bank Recruitment 2025 ಪ್ರಮುಖ ಲಿಂಕ್ ಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಫೆಬ್ರುವರಿ 07, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 28, 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: punjabandsindbank.co.in
ಈ ಸುದ್ದಿಯನ್ನೂ ಓದಿ: ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ