Bangalore Metro Recruitment 2025: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನಲ್ಲಿ ಖಾಲಿಯಿರುವ ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಜಿ೯ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಬೆಂಗಳೂರು ಮೆಟ್ರೋ ರೈಲ್ (ನಮ್ಮ ಮೆಟ್ರೋ) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಪ್ರಾಧಿಕಾರ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
ಹುದ್ದೆ ಹೆಸರು: ಟ್ರೈನ್ ಆಪರೇಟರ್ (ಟಿಓ)
ಹುದ್ದೆಗಳ ಸಂಖ್ಯೆ: 50 ಹುದ್ದೆಗಳು
ಉದ್ಯೋಗದ ಸ್ಥಳ: ಬೆಂಗಳೂರು (ಕನಾ೯ಟ)
ವೇತನ ಶ್ರೇಣಿ : ರೂ.35,000 – 82,660
Bangalore Metro Recruitment 2025 ಅರ್ಹತೆಗಳು
ಟ್ರೈನ್ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯಾಥಿ೯ಯು ಯಾವುದೇ ವಿಶ್ವವಿದ್ಯಾಲದಿಂದ 3 ವರ್ಷದ ಡಿಪ್ಲೊಮ ಶಿಕ್ಷಣದಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ / ಇಲೆಕ್ಟ್ರಿಕಲ್ ಅಂಡ್ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ / ಟೆಲಿಕಂಮ್ಯೂನಿಕೇಷನ್ಸ್ / ಇಲೆಕ್ಟ್ರಾನಿಕ್ಸ್ ಅಂಡ್ ಕಂಮ್ಯುನಿಕೇಷನ್ ಇಂಜಿನಿಯರಿಂಗ್ / ಇಲೆಕ್ಟ್ರಿಕಲ್ ಪವರ್ ಸಿಸ್ಟಮ್ / ಇಂಡಸ್ಟ್ರಿಯಲ್ ಇಲೆಕ್ಟ್ರಾನಿಕ್ಸ್ / ಮೆಕ್ಯಾನಿಕಲ್ ಇಂಜಿನಿಯರಿಂಗ್ ಇದರಲ್ಲಿ ಯಾವುದಾದರು ಒಂದು ವಿದ್ಯಾಹ೯ತೆ ಪಡೆದಿರಬೇಕು.
ವಯೋಮಿತಿ:
ನೋಟಿಫಿಕೇಶನ್ ಬಿಡುಗಡೆ ಮಾಡಿದ ದಿನಾಂಕಕ್ಕೆ ಗರಿಷ್ಠ 38 ವರ್ಷ ಮೀರಿರಬಾರದು.
ಕಾರ್ಯಾನುಭವ, ಇತರೆ ಹೆಚ್ಚಿನ ವಿವರಗಳಿಗೆ ಬಿಎಂಆರ್‌ಸಿಎಲ್ ವೆಬ್‌ಸೈಟ್‌ನಲ್ಲಿರುವ ವಿವರವಾದ ಅಧಿಸೂಚನೆಯನ್ನು ಗಮನಿಸಬಹುದು.
ವೇತನ ಶ್ರೇಣಿ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಆಯ್ಕೆಯಾಗುವ ಅಭ್ಯಾಥಿ೯ಗಳಿಗೆ ಪ್ರತಿ ತಿಂಗಳು ರೂ. 35,000 ರಿಂದ 82,660 ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್ ಮೂಲಕ ಸಲ್ಲಿಸಿದ ಅಜಿ೯ಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಅಜಿ೯ ಭರ್ತಿ ಮಾಡಿದ ಅರ್ಜಿ ಪ್ರಿಂಟ್ ತೆಗೆದುಕೊಂಡು ಕೆಳಗಿನ ವಿಳಾಸಕ್ಕೆ ಸಲ್ಲಿಸಿ.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಜೆನೆರಲ್ ಮ್ಯಾನೇಜರ್ (ಹೆಚ್‌ಆರ್), ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ ಹೆಚ್ ರಸ್ತೆ, ಶಾಂತಿನಗರ, ಬೆಂಗಳೂರು – 560027.
General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru – 560027
Bangalore Metro Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಮಾರ್ಚ್ 12, 2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-04-2025
ಅರ್ಜಿ ಸಹಿಮಾಡಲಾದ ಪ್ರಿಂಟ್‌ಔಟ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 09-04-2025 ರ ಸಂಜೆ 4.00 ಗಂಟೆವರೆಗೆ.
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಓದಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಬಿಎಂಆರ್‌ಸಿಎಲ್ ವೆಬ್‌ಸೈಟ್: bmrc.co.in
ಹೆಚ್ಚಿನ ಮಾಹಿತಿಗಾಗಿ ಸಂಪಕಿ೯ಸಿ:
ದೂರವಾಣಿ ಸಂಖ್ಯೆ : 080-25191039
ಇಮೇಲ್ ವಿಳಾಸ: contactus@bmrc.co.in
ಈ ಸುದ್ದಿಯನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ಅಟೆಂಡರ್ ಹುದ್ದೆಗಳ ನೇಮಕಾತಿ ರೂ. 57550 ವೇತನ
ಈ ಸುದ್ದಿಯನ್ನೂ ಓದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಯಾವುದೇ ಪರೀಕ್ಷೆ ಇಲ್ಲ