ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI Recruitment 2025) ನಲ್ಲಿ ಖಾಲಿ ಇರುವ ಹಿರಿಯ ಮತ್ತು ಕಿರಿಯ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮೂಲಕ ಅರ್ಜಿಸಲ್ಲಿಸಬಹುದು.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)
ಹುದ್ದೆಗಳ ಹೆಸರು: ಹಿರಿಯ ಮತ್ತು ಕಿರಿಯ ಸಹಾಯಕರು
ಒಟ್ಟು ಹುದ್ದೆಗಳ ಸಂಖ್ಯೆ: 224
ವೇತನ: 31,000 ರಿಂದ 1,10,000 ರೂ.
AAI Recruitment 2025 ಹುದ್ದೆಗಳ ವಿವರ:
- ಹಿರಿಯ ಸಹಾಯಕ (ಅಧಿಕೃತ ಭಾಷೆ): 04 ಹುದ್ದೆಗಳು
- ಹಿರಿಯ ಸಹಾಯಕ (Accounts): 21 ಹುದ್ದೆಗಳು
- ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್): 47 ಹುದ್ದೆಗಳು
- ಕಿರಿಯ ಸಹಾಯಕ (ಅಗ್ನಿಶಾಮಕ ಸೇವೆ): 152 ಹುದ್ದೆಗಳು
ವಿದ್ಯಾರ್ಹತೆ:
- ಹಿರಿಯ ಸಹಾಯಕ (ಅಧಿಕೃತ ಭಾಷೆ) ಹುದ್ದೆಗಳಿಗೆ, ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
- ಹಿರಿಯ ಸಹಾಯಕ (ಅಕೌಂಟ್ಸ್) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಬಿ.ಕಾಂ ಪದವಿಯನ್ನು ಪೂರ್ಣಗೊಳಿಸಿರಬೇಕು.
- ಜೂನಿಯರ್ ಸಹಾಯಕ (ಅಗ್ನಿಶಾಮಕ ಸೇವೆ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10 ನೇ ತರಗತಿ, ದ್ವಿತೀಯ ಪಿಯುಸಿ ಮತ್ತು ಡಿಪ್ಲೊಮಾ ಉತ್ತೀರ್ಣರಾಗಿರಬೇಕು.
- ಹಿರಿಯ ಸಹಾಯಕ (ಎಲೆಕ್ಟ್ರಾನಿಕ್ಸ್) ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಹೊಂದಿರಬೇಕು.
AAI Recruitment 2025 ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಮಾರ್ಚ್ 5, 2025 ಕ್ಕೆ ಗರಿಷ್ಠ 30 ವರ್ಷಕ್ಕಿಂತ ಕಡಿಮೆ ಇರಬೇಕು.
ವಯೋಮಿತಿ ಸಡಿಲಿಕೆ:
OBC ವರ್ಗ ಅಭ್ಯರ್ಥಿಗಳಿಗೆ: 03 ವರ್ಷ.
SC ಮತ್ತು ST ವರ್ಗದ ಅಭ್ಯರ್ಥಿಗಳಿಗೆ: :5 ವರ್ಷ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: 1000 ರೂ.
ಮಹಿಳೆಯರು/SC/ST/PWD/ಮಾಜಿ ಸೈನಿಕರು ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಪಾವತಿಸುವ ವಿಧಾನ: ಆನ್‌ಲೈನ್‌ನಲ್ಲಿ ಪಾವತಿಸಬಹುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದವರನ್ನು ಲಿಖಿತ ಪರೀಕ್ಷೆ, ಕಂಪ್ಯೂಟರ್ ಪರೀಕ್ಷೆ, ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ವೇತನ:
ಹಿರಿಯ ಸಹಾಯಕ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 31,000 ರಿಂದ 1,10,000 ರೂ. ವೇತನ ಸಿಗಲಿದೆ.
AAI Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 4 ಫೆಬ್ರವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 5 ಮಾರ್ಚ್ 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್: aai.aero
ಈ ಸುದ್ದಿಯನ್ನೂ ಓದಿ: PUC, ಪದವಿ, ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ
ಈ ಸುದ್ದಿಯನ್ನೂ ಓದಿ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ನಲ್ಲಿ 400 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ