Anna Bhagya: ಅನ್ನ ಭಾಗ್ಯ ಫಲಾನುಭವಿಗಳಿಗೆ ಅಕ್ಕಿ ಜೊತೆಗೆ ಎಣ್ಣೆ, ಬೇಳೆ, ಸಕ್ಕರೆ ವಿತರಣೆ ಪ್ರಾರಂಭ

WhatsApp Group Join Now
Telegram Group Join Now

Anna Bhagya: ಕರ್ನಾಟಕ ಜನತೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಅನ್ನ ಭಾಗ್ಯ ಯೋಜನೆಯಡಿ ಹಣ ಅಥವಾ ಐದು ಕೆಜಿ ಅಕ್ಕಿ ಬದಲಿಗೆ BPL ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಬೇಳೆಕಾಳುಗಳು, ಸಕ್ಕರೆ ಅಥವಾ ಅಡುಗೆ ಎಣ್ಣೆಯನ್ನು ವಿತರಿಸುವುದಾಗಿ ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್ ಮುನಿಯಪ್ಪ ಮಂಗಳವಾರ ಹೇಳಿದ್ದಾರೆ.

ಸರ್ಕಾರದಿಂದ BPL ರೇಷನ್‌ ಕಾರ್ಡ್‌ (BPL Ration Card)​​‌ ಹೊಂದಿರುವ ಗ್ರಾಹಕರಿಗೆ ಮಹತ್ವದ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಸಚಿವರು ಕೆ.ಎಚ್ ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರಾದ ಪ್ರಹ್ಲಾದ್ ಜೋಶಿ ರವರನ್ನು ಭೇಟಿ ಮಾಡಿ ತಿಂಗಳಿಗೆ ಎಷ್ಟು ಅಕ್ಕಿ ವಿತರಣೆ ಆಗುತ್ತಿದೆ, ವರ್ಷಕ್ಕೆ ಎಷ್ಟು ಅಕ್ಕಿ ಬೇಕು ಎಂಬುದನ್ನು ಅವರು ಪ್ರಸ್ತಾಪಿಸಿದ್ದಾರೆ.

ಅನ್ನ ಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರವು ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು.
ಆದರೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ಸರ್ಕಾರ (ಎಫ್‌ಸಿಐ) ನಿರಾಕರಿಸಿದ ನಂತರ, ಅಕ್ಕಿ ಕೊರತೆ ಇರುವುದರಿಂದ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಬದಲಿಗೆ ತಲಾ 170 ರೂ. ನೀಡುತ್ತಿದೆ.

ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ 2000 ರೂ. ಹಣ ಜಮಾ

ಪ್ರಸ್ತುತ ಅನ್ನಭಾಗ್ಯ (Anna Bhagya Stutas) ಯೋಜನೆಯಡಿ ಫಲಾನುಭವಿಗಳಿಗೆ 5Kg ಅಕ್ಕಿ ಹಾಗೂ ಇನ್ನುಳಿದ 5Kg ಅಕ್ಕಿ ಬದಲಿಗೆ ಹಣ ನೀಡಲಾಗುತ್ತಿದೆ. ಆದರೀಗ ಇತ್ತೀಚಿನ ಸಮೀಕ್ಷೆಯ ಪ್ರಕಾರ, 93 % ಬಿಪಿಎಲ್‌ ಕಾರ್ಡ್ ಹೊಂದಿರುವವರು ಅಕ್ಕಿ ಜೊತೆಗೆ ಬೇಳೆಕಾಳುಗಳು, ಸಕ್ಕರೆ ಅಥವಾ ಅಡುಗೆ ಎಣ್ಣೆಯನ್ನು ಪಡೆಯಲು ಒಲವು ತೋರುತ್ತಿದ್ದಾರೆ.

ಆದ್ಯತೆ ನೀಡುವ ಫಲಾನುಭವಿಗಳ ಬಗ್ಗೆ ಕೆ. ಎಚ್ ಮುನಿಯಪ್ಪ, ಅವರು ನಾವು ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಹೇಗೆ ಮಾಡಬೇಕೆಂದು ಎಂದು ಈ ಕುರಿತು ಚರ್ಚಿಸುತ್ತೇವೆ ಎಂದು ಅವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ 13 ಲಕ್ಷ ಬಡತನ ರೇಖೆಗಿಂತ ಕೆಳಗಿರುವ (BPL) ರೇಷನ ಕಾರ್ಡ್‌ಗಳಿವೆ. ಅಣ್ಣ ಭಾಗ್ಯ ಯೋಜನೆಯಡಿ 50 ಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ಅಕ್ಕಿ ವಿತರಿಸಲಾಗುತ್ತಿದ್ದು, ಎಂದು ವಿವರಿಸಿದರು. ಅವರ ಅಗತ್ಯಗಳನ್ನು ಪೂರೈಸಲು, ಕರ್ನಾಟಕ ರಾಜ್ಯಕ್ಕೆ ಪ್ರತಿ ತಿಂಗಳು 20 ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ ಎಂದು ವಿವರಿಸಿದರು.

ಇದನ್ನೂ ಓದಿ: ಬೆಳೆಹಾನಿ ಪರಿಹಾರ ಆಧಾ‌ರ್ ಲಿಂಕ್ ಆದ ರೈತರ ಪಟ್ಟಿ ಬಿಡುಗಡೆ

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ನ್ಯಾಷನಲ್ ಕೋಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ) (FCI) ನಮಗೆ ಕೆಜಿಗೆ 34 ​​ರೂ. ದರದಲ್ಲಿ ಅಕ್ಕಿಯನ್ನು ನೀಡುತ್ತಿದೆ. Anna Bhagya ರಾಜ್ಯ ಸರ್ಕಾರವು ಭಾರತೀಯ ಆಹಾರ ನಿಗಮವನ್ನು (ಎಫ್‌ಸಿಐ) ಸಂಪರ್ಕಿಸಿದೆ, ಇದು ಕೆಜಿಗೆ 34 ರೂ.ಗೆ ಅಕ್ಕಿ ಪಡೆಯುತ್ತಿದೆ. ಆದರೆ ಈಗ ಕೇಂದ್ರವು ಕೆಜಿಗೆ 28 ​​ರೂ. ನೀಡಲು ಮುಂದಾಗಿದೆ. ಕೇಂದ್ರ ಆಹಾರ ಸಚಿವರ ಜೊತೆ ಮಾತನಾಡಿ ರಾಜ್ಯ ಅವಶ್ಯಕತೆಗೆ ಅನುಗುಣವಾಗಿ ಅಕ್ಕಿ ಖರೀದಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಅಂಚೆ ಇಲಾಖೆಯಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

Leave a Comment