ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ 6ನೇ ತರಗತಿಗೆ ಉಚಿತ ಪ್ರವೇಶ: ಅರ್ಜಿ ಆಹ್ವಾನ : APJ Abdul Kalam School Application 2025

WhatsApp Group Join Now
Telegram Group Join Now

ಕರ್ನಾಟಕದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಅಬ್ದುಲ್ ಕಲಾಂ ವಸತಿ ಶಾಲೆ, (APJ Abdul Kalam School Application) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ , ಮತ್ತು ಪಾರ್ಸಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಶೈಕ್ಷಣಿಕ ವರ್ಷದ 6ನೇ ತರಗತಿಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕಾಗಿ ”ಸೇವಾ ಸಿಂಧು ಪೋರ್ಟಲ್” ಆನ್‌ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ.

APJ Abdul Kalam School Application ವಸತಿ ಶಾಲೆಗಳ ವಿವರ:

ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಅಸೈಗೋಳಿ ಉಳ್ಳಾಲ , (ಆಂಗ್ಲ ಮಾಧ್ಯಮ,ಪಠ್ಯಕ್ರಮ-ಸಿ.ಬಿ.ಎಸ್.ಇ)
ಸರಕಾರಿ ಮುಸ್ಲಿಂ ವಸತಿ ಶಾಲೆ ಅಸೈ ಮದಕ (ಆಂಗ್ಲ ಮಾಧ್ಯಮ,ಪಠ್ಯಕ್ರಮ -ರಾಜ್ಯ.)

zಪ್ರತಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ಸಮವಸ್ತ್ರ, ಬೂಟು, ಕಾಲು ಚೀಲ ನೀಡಲಾಗುತ್ತದೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಲಾಗುತ್ತಿದೆ. ಸದರಿ ಶಾಲೆಗಳಲ್ಲಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳ ಸೌಲಭ್ಯ ಸೇರಿದಂತೆ ವಿವಿಧ ಸವಲತ್ತುಗಳನ್ನು ಒದಗಿಸಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಹ ವಿದ್ಯಾರ್ಥಿಗಳು ಪೋಷಕರು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಮಾರ್ಚ್ 10 ರೊಳಗೆ ಅರ್ಜಿ ಸಲ್ಲಿಸಬಹುದು.

ಈ ಸುದ್ದಿಯನ್ನೂ ಓದಿ:10th, 12th ಪಾಸಾದವರಿಗೆ ಇಂಡಿಯನ್ ಮರ್ಚೆಂಟ್ ನೇವಿ ಹುದ್ದೆಗಳ ನೇಮಕಾತಿ

APJ Abdul Kalam School Application ಹೆಚ್ಚಿನ ಮಾಹಿತಿಗೆ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990
ಅಥವಾ ಪಾಂಡೇಶ್ವರ ಓಲ್ಡ್‌ಕೆಂಟ್ ರೋಡ್‌ನಲ್ಲಿರುವ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ಮತ್ತೆ ದಿನಾಂಕ ವಿಸ್ತರಣೆ 2025

Leave a Comment