8000 ಶಿಕ್ಷಕರ ಬೃಹತ್ ನೇಮಕಾತಿ 2024 | Army Public School Recruitment 2024

WhatsApp Group Join Now
Telegram Group Join Now

ಭಾರತೀಯ ಸೇನಾ ಸಿಬ್ಬಂದಿ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಆರ್ಮಿ ವೆಲ್ ಫೇರ್ ಎಜುಕೇಷನ್ ಸೊಸೈಟಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೈನ್ಡ್ ಗ್ರಾಜುವೇಟ್ ಟೀಚರ್ ಮತ್ತು ಪ್ರೈಮರಿ ಗ್ರಾಜುವೇಟ್ ಟೀಚರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆರ್ಮಿ ಪಬ್ಲಿಕ್ ಸ್ಕೂಲ್ ಟೀಚರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Army Public School Recruitment 2024

ಒಟ್ಟು ಹುದ್ದೆಗಳ ಸಂಖ್ಯೆ: 8,000 +

ಹುದ್ದೆಗಳ ಹೆಸರು: ಟೇಚರ್

ಹುದ್ದೆಗಳ ವಿವರ:
ಪೋಸ್ಟ್ ಗ್ರಾಜುಯೇಟ್ ಟೀಚರ್ (Post Graduate Teacher)
ಟ್ರೈನ್’ಡ್ ಗ್ರಾಜುಯೇಟ್ ಟೇಚರ್ (Trained Graduate Teacher)
ಪ್ರಾಥಮಿಕ ಶಾಲಾ ಟೀಚರ್ (Primary Teacher)

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಜೊತೆಗೆ B.ED ಪದವಿಯಲ್ಲಿ ಶೇಕಡ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಹಾಗೂ ಅಭ್ಯರ್ಥಿಗಳು ಸಿಟಿಇಟಿ ಅಥವಾ ಟಿಇಟಿ ಪರೀಕ್ಷೆ ಪಾಸಾಗಿರಬೇಕು.

ವಯೋಮಿತಿ:
Army Public School ನೇಮಕಾತಿ ಅಧಿಸೂಚನೆ ಪ್ರಕಾರ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 40 ವರ್ಷದೊಳಗಿರಬೇಕು ಮತ್ತು ಕಾರ್ಯಾನುಭವ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 57 ವರ್ಷದ ಒಳಗಿರಬೇಕು.

Army Public School Recruitment 2024 ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 385 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಯುಪಿಐ ಮೂಲಕ ಪಾವತಿಸಬಹುದು.

ಇದನ್ನೂ ಓದಿ: ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆಯಲ್ಲಿ ಆಯ್ಕೆಯಾದ ನಂತರ ಸಂದರ್ಶನ ನಡೆಸಿ ಆನಂತರ ಭೋದನಾ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 03 ಅಕ್ಟೋಬರ್ , 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಅಕ್ಟೋಬರ್, 2024

ಇದನ್ನೂ ಓದಿ: ದಸರಾ ಪ್ರಯುಕ್ತ ಗೃಹಲಕ್ಷ್ಮೀ ಫಲಾನುಭವಿಗಳಿಗೆ 2 ಕಂತಿನ ಹಣ ಒಟ್ಟಿಗೆ 4,000 ರೂ. ಈ ದಿನ ಜಮಾ ಆಗಲಿದೆ 

Army Public School Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: awesindia.com

Leave a Comment