2024 – 25 ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್ ಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2A, 2B, 3A, 3B, SC / ST ಹಾಗೂ ಇತರೆ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿನ (OBC Hostel Application) ಹಾಸ್ಟೆಲ್ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ.
BCM Pre Matric Hostels Application 2024-25
ಅರ್ಹತಾ ಮಾನದಂಡಗಳು:
ವಿದ್ಯಾರ್ಥಿಗಳು ಪ್ರವರ್ಗ-1, 2ಎ, 2ಬಿ, 3ಎ, 3ಬಿ, SC, ST ವರ್ಗದವರು ಆಗಿರಬೇಕು.
ಪ್ರವರ್ಗ – 1, SC/ ST ವರ್ಗದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ: 1.00 ಲಕ್ಷ ರೂ.
ಪ್ರವರ್ಗ – 2ಎ, 2ಬಿ, 3ಎ, 3ಬಿ ವರ್ಗಗಳಿಗೆ ಸೇರಿದ ಪೋಷಕರ ವಾರ್ಷಿಕ ಆದಾಯ: 44,500 ರೂ.
ಆಸಕ್ತ ವಿದ್ಯಾರ್ಥಿಗಳು shop.karnataka.gov.in/bcwd ವೆಬ್ಸೈಟ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಾಖಲೆಗಳು:
ಆಧಾರ್ ಕಾರ್ಡ್
ಪ್ರಸ್ತುತ ಶಿಕ್ಷಣಕ್ಕೆ ಪ್ರವೇಶ ಪಡೆದ ಶಿಕ್ಷಣ ದಾಖಲೆಗಳು
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ
ಭಾವಚಿತ್ರ
ಇತ್ಯಾದಿ
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭಿಕ ದಿನಾಂಕ : 28/06/2024
ಆನ್ಲೈನ್ ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ : 20/07/2024
ಆಯ್ಕೆಯಾಗುವ ವಿದ್ಯಾರ್ಥಿಗಳು ಹಾಸ್ಟೆಲ್ ಪ್ರವೇಶ ಪಡೆಯಲು ಕೊನೆಯ ದಿನಾಂಕ : 31/07/2024
BCM Pre Matric Hostels Application ಪ್ರಮುಖ ಲಿಂಕ್ಗಳು:
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: bcwd.karnataka.gov.in
2024-25 ನೇ ಸಾಲಿನ ಮೆಟ್ರಿಕ್ ಪೂರ್ವ ಹಾಸ್ಟೆಲ್ ಅರ್ಜಿ ಪ್ರಾರಂಭ
ಗಮನಿಸಿ:
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ತಾಂತ್ರಿಕ ತೊಂದರೆಯಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 8050770004, 8050770005 ಸಂಪರ್ಕಿಸಿ.