ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ಸಾಮಾನ್ಯ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಂದ ಉಚಿತ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಪದವಿ ಕೋರ್ಸ್‌ಗಳನ್ನು ಓದುತ್ತಿರುವ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
shp Hostel: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಸಿಡಬ್ಲ್ಯೂಡಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
BCWD Post Matric Hostels Application Online
ಅರ್ಹತಾ ಮಾನದಂಡಗಳು:
ವಿದ್ಯಾರ್ಥಿಗಳು ಪ್ರವರ್ಗ-1, 2A, 2B, 3A, 3B, SC, ST ವರ್ಗಕ್ಕೆ ಸೇರಿದವರಾಗಿದ್ದರೆ, ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ವಿವರ:
ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC/ST) ವಿದ್ಯಾರ್ಥಿಗಳು: 2.50 ಲಕ್ಷ ರೂ.
ಪ್ರವರ್ಗ-2A, 2B, 3A, 3B ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳು: 1 ಲಕ್ಷ ರೂ.
ಪ್ರಮುಖ ದಾಖಲೆಗಳು:
ಆಧಾರ್ ಕಾರ್ಡ್
ವೃತ್ತಿಪರ ಪದವಿ / ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದ ದಾಖಲೆ / ರಶೀದಿ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ
ಅರ್ಜಿದಾರರ ಪೋಟೋ
ಇತ್ಯಾದಿ.
SHP Hostel ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಆರಂಭಿಕ ದಿನಾಂಕ : 09-08-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-09-2024
ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆ ದಿನಾಂಕ : 11-09-2024
ಆಯ್ಕೆಯಾದ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಪ್ರವೇಶ ಪಡೆಯಲು ಕೊನೆಯ ದಿನಾಂಕ : 17-09-2024
ಇದನ್ನೂ ಓದಿ: ರೈಲ್ವೆ ಸ್ಟೇಷನ್ ಮಾಸ್ಟರ್ ಮತ್ತು ಲೋಕೊ ಪೈಲಟ್ ಹುದ್ದೆಗಳ ನೇಮಕಾತಿ 2024
BCWD Post Matric Hostels Application Onlineಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bcwd.karnataka.gov.in ಅಥವಾ shp.karnataka.gov.in
ಹೆಚ್ಚಿನ ಮಾಹಿತಿಗಾಗಿ:
ಇ-ಮೇಲ್: bcwd.hostels@karnataka.gov.in
ಸಹಾಯವಾಣಿ ಸಂಖ್ಯೆ – 8050770005
ಇದನ್ನೂ ಓದಿ: 1130 ಫೈರ್ ಮ್ಯಾನ್ & ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ