ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಡಿಯಲ್ಲಿ ಬರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ನಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
BESCOM Recruitment 2024:
ಹುದ್ದೆ ಹೆಸರು: ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್
ಹುದ್ದೆಗಳ ಸಂಖ್ಯೆ: 935
ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ
ಹುದ್ದೆಗಳ ವಿವರ:
ಕಿರಿಯ ಪವರ್ ಮ್ಯಾನ್( KK): 29
ಕಿರಿಯ ಪವರ್‌ಮ್ಯಾನ್ (NKK): 906
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ (SSLC) ತೇರ್ಗಡೆ ಹೊಂದಿರಬೇಕು.
BESCOM Recruitment 2024 ವೇತನ ಶ್ರೇಣಿ:
ಸ್ಟೇಷನ್ ಅಟೆಂಡೆಂಟ್ ಮತ್ತು ಜೂನಿಯರ್ ಪವರ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.17,000 ರಿಂದ 63,000/- ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ವರ್ಷ ಪೂರ್ಣಗೊಳಿಸರಬೇಕು ಹಾಗೂ, ಗರಿಷ್ಠ 40 ವರ್ಷ ವಯೋಮಿತಿ ಮೀರಿರಬಾರದು.
ಗರಿಷ್ಠ ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: 38 ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ
ಅರ್ಜಿ ಶುಲ್ಕ:
ಪ್ರವರ್ಗ -1, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು: 614 ರೂ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಭ್ಯರ್ಥಿಗಳು: 378 ರೂ.
ಅಂಗವಿಕಲ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ
ಸಹಿಷ್ಣುತೆ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 21-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ನವೆಂಬರ್ 2024
ಶುಲ್ಕ ಪಾವತಿ ಕೊನೆಯ ದಿನಾಂಕ: 25 ನವೆಂಬರ್, 2024
BESCOM Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು(KK): ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು(NKK): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bescom.karnataka.gov.in
ಸರ್ಕಾರದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಅರ್ಜಿ ಆಹ್ವಾನ
ರೈತರಿಗೆ ಗುಡ್ ನ್ಯೂಸ್ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 50,000 ರೂ. ಸಹಾಯಧನ
ಯುವಕ ಯುವತಿಯರಿಗೆ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ ಜೊತೆಗೆ ಊಟ ವಸತಿ ಉಚಿತ