ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL Recruitment 2025) ಖಾಲಿ ಇರುವ ಎಂಜಿನಿಯರ್ ಟ್ರೈನಿ ಮತ್ತು ಸೂಪರ್‌ವೈಸರ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (Bharat Heavy Electricals Limited) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಸಂಸ್ಥೆ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ಹುದ್ದೆಗಳ ಹೆಸರು: ಎಂಜಿನಿಯರ್ ಟ್ರೈನಿ, ಸೂಪರ್‌ವೈಸರ್ ಟ್ರೈನಿ
ಒಟ್ಟು ಹುದ್ದೆಗಳ ಸಂಖ್ಯೆ: 400
ಉದ್ಯೋಗದ ಸ್ಥಳ: ಬೆಂಗಳೂರು ಸೇರಿ ಭಾರತಾದ್ಯಂತ.
BHEL Recruitment 2025 ಹುದ್ದೆಗಳ ವಿವರ:
ಎಂಜಿನಿಯರ್ ಟ್ರೈನಿ: 150
ಸೂಪರ್‌ವೈಸರ್ ಟ್ರೈನಿ: 250
ವಿದ್ಯಾರ್ಹತೆ:
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಅಧಿಸೂಚನೆ ಪ್ರಕಾರ
ಎಂಜಿನಿಯರ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು. ಹಾಗೂ ಸೂಪರ್‌ವೈಸರ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮ ಇನ್ ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು ಎಂಜಿನಿಯರ್ ಟ್ರೈನಿ ಹುದ್ದೆಗಳಿಗೆ 29 ವರ್ಷ ಹಾಗೂ ಸೂಪರ್‌ವೈಸರ್ ಟ್ರೈನಿ ಹುದ್ದೆಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ಅನ್ನು ನೀಡಲಾಗುತ್ತದೆ.
ವಯೋಮಿತಿ ಸಡಿಲಿಕೆ:
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ: 3 ವರ್ಷ,
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ:
ಸಾಮಾನ್ಯ/ಇಡಬ್ಲ್ಯುಎಸ್/ಒಬಿಸಿ ಅಭ್ಯರ್ಥಿಗಳು: 1,072 ರೂ.
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಾಜಿ ಸೈನಿಕ ಅಭ್ಯರ್ಥಿಗಳು: 472 ರೂ.
ಪಾವತಿ ವಿಧಾನ: ಆನ್‌ಲೈನ್.
ಈ ಸುದ್ದಿಯನ್ನೂ ಓದಿ: ಕಿರಿಯ ಸಹಾಯಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, 52,650 ರೂ. ವೇತನ
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ವೇತನ:
ಎಂಜಿನಿಯರ್ ಟ್ರೈನಿ ಹುದ್ದೆಗೆ: 50,000 – 1,80,000 ರೂ.
ಸೂಪರ್‌ವೈಸರ್ ಟ್ರೈನಿ ಹುದ್ದೆಗೆ: 32,000 – 1,20,000 ರೂ.
BHEL Recruitment 2025 ಅಧಿಸೂಚನೆ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕಗಳು: ಫೆಬ್ರವರಿ 1, 2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 28, 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: careers.bhel.in
ಈ ಸುದ್ದಿಯನ್ನೂ ಓದಿ: ಹತ್ತನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಕೆಲಸ