ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಬ್ಯಾಂಕ್ ಆಫ್ ಬರೋಡಾ (BOB Recruitment 2025) ಖಾಲಿ ಇರುವ 4,000 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಮಾರ್ಚ್ 11 ಅಥವಾ ಅದಕ್ಕಿಂತ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಬ್ಯಾಂಕ್ ಆಫ್ ಬರೋಡಾ (Bank of Baroda) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಹುದ್ದೆಗಳ ಸಂಖ್ಯೆ: 4,000
ಕನಾ೯ಟಕದಲ್ಲಿ ಹುದ್ದೆಗಳ ಸಂಖ್ಯೆ: 537
ಉದ್ಯೋಗದ ಸ್ಥಳ: ಕನಾ೯ಟಕ ಸೇರಿದಂತೆ ಭಾರತದ್ಯಾಂತ
ಹುದ್ದೆಗಳ ಸಂಖ್ಯೆ: ಅಪ್ರೆಂಟಿಸ್
BOB Recruitment 2025 ಶೈಕ್ಷಣಿಕ ಅರ್ಹತೆ:
ಬ್ಯಾಂಕ್ ಆಫ್ ಬರೋಡಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಜಿ೯ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಯಿಂದ ಪದವಿ ಪೂರ್ಣಗೊಳಿಸಿರಬೇಕು .
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಜಿ೯ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ ದಿನಾಂಕ 01-02-2025 ರಂತೆ ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 28 ವರ್ಷದೊಳಗೆ ಇರಬೇಕು.
ವಯೋಮಿತಿ ಸಡಿಲಿಕೆ:
- ಒಬಿಸಿ ಅಭ್ಯರ್ಥಿಗಳು: 3 ವರ್ಷ
- SC/ST ಅಭ್ಯರ್ಥಿಗಳು: 5 ವರ್ಷ
- ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷ
- ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷ
- ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳ ವಯೋಮಿತಿ ಸಡಲಿಕೆ ಇರಲಿದೆ.
ಅರ್ಜಿ ಶುಲ್ಕ:
- ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 800/-
- ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು: ರೂ. 600/-
- ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: ರೂ. 400/-
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ಆಯಾ ರಾಜ್ಯದ ಸ್ಥಳೀಯ ಭಾಷಾ ಪರೀಕ್ಷೆ ಬರೆಯಬೇಕು.
ಈ ಸುದ್ದಿಯನ್ನೂ ಓದಿ: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನೇರ ನೇಮಕಾತಿ 2025
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯಾಥಿ೯ಗಳಿಗೆ ಪ್ರತಿ ತಿಂಗಳು ರೂ. 12,000 ರಿಂದ 15,000/- ಸಂಬಳ ನೀಡಲಾಗುತ್ತದೆ.
BOB Recruitment 2025 ಪ್ರಮುಖ ದಿನಾಂಕಗಳು:
ಅಜಿ೯ ಸ್ವೀಕರಿಸಲ್ಲು ಪ್ರಾರಂಭದ ದಿನಾಂಕ: 19-ಫೆಬ್ರವರಿ-2025
ಅಜಿ೯ ಸಲ್ಲಿಸಲಿ ಕೊನೆಯ ದಿನಾಂಕ: 11-ಮಾಚ್೯-2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅಜಿ೯ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವಬ್ ಸೈಟ್ ವಿಳಾಸ: bankofbaroda.in
ಈ ಸುದ್ದಿಯನ್ನೂ ಓದಿ: