ಕೇಂದ್ರ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಚೆ ಇರುವವರಿಗೆ ಸಿಹಿ ಸುದ್ದಿ ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ನಲ್ಲಿ ಖಾಲಿ ಇರುವ ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ ( BPNL) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
BPNL Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 2, 248
ಹುದ್ದೆ ಹೆಸರು: ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ
ಉದ್ಯೋಗದ ಸ್ಥಳ: ಭಾರತದಾದ್ಯಂತ
ಹುದ್ದೆಗಳ ವಿವರ:
ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಹುದ್ದೆಗಳು: 562
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗಳು: 1,686
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಹುದ್ದೆಗೆ ಅನುಸಾರವಾಗಿ ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಉತ್ತೀರ್ಣರಾಗಿಬೇಕು. ಹಾಗೂ ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರು 10 ನೇ ತರಗತಿ (SSLC) ಪಾಸಾಗಿರಬೇಕು.
BPNL Recruitment 2024 ವೇತನ ಶ್ರೇಣಿ:
ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಹುದ್ದೆಗೆ ಆಯ್ಕೆಯಾದರೆ 40,000 ರೂ.
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗೆ ಆಯ್ಕೆಯಾದರೆ 30,500 ರೂ.
ವಯೋಮಿತಿ:
ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷದೊಳಗೆ ಇರಬೇಕು.
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಸಣ್ಣ ಉದ್ಯಮ ವಿಸ್ತರಣೆ ಅಧಿಕಾರಿ ಹುದ್ದೆಗೆ ಎಲ್ಲಾ ಅಭ್ಯರ್ಥಿಗಳು: 944 ರೂ.
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ ಹುದ್ದೆಗೆ ಎಲ್ಲಾ ಅಭ್ಯರ್ಥಿಗಳು 826 ರೂ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 09 ನವೆಂಬರ್ 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 /12/ 2024
BPNL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bharatiyapashupalan.com
ಉಚಿತ ಪತ್ರಿಕೋದ್ಯಮ ತರಬೇತಿ ಜತೆಗೆ 15,000 ರೂ. ಸ್ಟೈಫಂಡ್ ಅರ್ಜಿ ಆಹ್ವಾನ
ವಿದ್ಯಾರ್ಥಿಗಳಿಗೆ 50,000 ರೂ. ಶ್ರೀಮತಿ ಶ್ಯಾಮ್ ಲತಾ ಗರ್ಗ್’ ಇಂಡಿಯಾ ವಿದ್ಯಾರ್ಥಿವೇತನ