ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಭಾರತದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (Specialist Officer) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೆನರಾ ಬ್ಯಾಂಕ್ (Canara Bank Recruitment 2025) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
Canara Bank Recruitment 2025
ಒಟ್ಟು ಹುದ್ದೆಗಳ ಸಂಖ್ಯೆ: 60
ಉದ್ಯೋಗ ಸ್ಥಳ – ಭಾರತಾದ್ಯಂತ
ಹುದ್ದೆಗಳ ಹೆಸರು: ಸ್ಪೆಷಲಿಸ್ಟ್ ಆಫೀಸರ್ (Specialist Officer)
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಪದವಿ, ಸ್ನಾತಕೋತ್ತರ ಪದವಿ, BE/B.Tech, BCA, MCA, MA ಸೇರಿದಂತೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ ವಯಸ್ಸು 25 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸು 35 ವರ್ಷದೊಳಗೆ ಇರಬೇಕು.
ವಯೋಮಿತಿ ಸಡಿಲಿಕೆ :
ಅಂಗವಿಕಲ (PwBD) ಅಭ್ಯರ್ಥಿಗಳಿಗೆ : 10 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ : 3 ವರ್ಷ
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಅಧಿಸೂಚನೆ ಪ್ರಕಾರ ವಾರ್ಷಿಕ 1,800,000 ರಿಂದ 2,700,000 ರೂ. ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 06 ಜನವರಿ 2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ಜನವರಿ 2025
Canara Bank Recruitment 2025 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: canarabank.com
ಇದನ್ನೂ ಓದಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025
ಇದನ್ನೂ ಓದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2,882 ಹುದ್ದೆಗಳ ನೇಮಕಾತಿ 2025