ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಖಾಲಿ ಇರುವ ಸೂಪರಿಂಟೆಂಡೆಂಟ್ ಮತ್ತು ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (cbse recruitment 2025) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
CBSE Junior Assistant Recruitment 2025
ಒಟ್ಟು ಹುದ್ದೆಗಳ ಸಂಖ್ಯೆ: 212
ಹುದ್ದೆಗಳ ಹೆಸರು: ಸೂಪರಿಂಟೆಂಡೆಂಟ್ ಮತ್ತು ಜೂನಿಯರ್ ಅಸಿಸ್ಟೆಂಟ್
ಉದ್ಯೋಗದ ಸ್ಥಳ: ಭಾರತದಾದ್ಯಂತ
ಹುದ್ದೆಗಳ ವಿವರ:
ಸೂಪರಿಂಟೆಂಡೆಂಟ್: 142
ಜೂನಿಯರ್ ಅಸಿಸ್ಟೆಂಟ್: 70
ವಿದ್ಯಾರ್ಹತೆ:
ಸೂಪರಿಂಟೆಂಡಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಪಾಸಾಗಿರಬೇಕು. ಜತೆಗೆ 3 ವರ್ಷ ಕಾರ್ಯಾನುಭವ ಹೊಂದಿರಬೇಕು.
ಜೂನಿಯರ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಪಾಸಾಗಿರಬೇಕು. ಟೈಪಿಂಗ್ ಸ್ಕಿಲ್ ಹೊಂದಿರಬೇಕು.
ವಯೋಮಿತಿ:
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಹಾಗೂ ಗರಿಷ್ಠ ವಯೋಮಿತಿ 30 ವರ್ಷದೊಳಗೆ ಇರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್‌ಸಿ/ ಎಸ್ಟಿ ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಶ್ರೇಣಿ:
ಸೂಪರಿಂಟೆಂಡೆಂಟ್: 35,400 – 1,12,400 ರೂ.
ಜೂನಿಯರ್ ಅಸಿಸ್ಟೆಂಟ್: 19,900 – 63,200 ರೂ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ/ EWS ಅಭ್ಯರ್ಥಿಗಳು: 800 ರೂ.
SC/ST/ PwBD/ ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಟೈಪಿಂಗ್ ಸ್ಕಿಲ್ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
cbse recruitment 2025 ಪ್ರಮುಖ ದಿನಾಂಕ:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಜನವರಿ 02, 2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 31, 2025
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: cbse.gov.in
ಇದನ್ನೂ ಓದಿ: ನೌಕರರ ರಾಜ್ಯ ವಿಮಾ ನಿಗಮದಲ್ಲಿ 608 ಹುದ್ದೆಗಳ ನೇಮಕಾತಿ
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30 ಸಾವಿರಕ್ಕೂ ಅಧಿಕ ಬೃಹತ್ ನೇಮಕಾತಿ