ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುವ ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (CDAC Recruitment 2024) ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಮ್ಯಾನೇಜರ್ ಸೇರಿದಂತೆ ಹಲವು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (Centre for Development of Advanced Computing) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆ ಹೆಸರು: ಪ್ರಾಜೆಕ್ಟ್ ಎಂಜಿನಿಯರ್, ಪ್ರಾಜೆಕ್ಟ್ ಅಸೋಸಿಯೇಟ್
ಒಟ್ಟು ಹುದ್ದೆಗಳ ಸಂಖ್ಯೆ: 949
CDAC Recruitment 2024 ಹುದ್ದೆಗಳ ವಿವರ
- ಪ್ರಾಜೆಕ್ಟ್ ಅಸೋಸಿಯೇಟ್: 93 ಹುದ್ದೆ
- ಪ್ರಾಜೆಕ್ಟ್ ಇಂಜಿನಿಯರ್: 401 ಹುದ್ದೆ
- ಪ್ರಾಜೆಕ್ಟ್ ಮ್ಯಾನೇಜರ್ / ಪ್ರೋಗ್ರಾಂ ಮ್ಯಾನೇಜರ್ / ಪ್ರೋಗ್ರಾಂ ಡೆಲಿವರಿ ಮ್ಯಾನೇಜರ್ / ನಾಲೆಡ್ಜ್ ಪಾರ್ಟ್‌ನರ್: 71
- ಪ್ರಾಜೆಕ್ಟ್ ಟೆಕ್ನಿಷಿಯನ್: 22
- ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ / ಮಾಡ್ಯೂಲ್ ಲೀಡ್ / ಪ್ರಾಜೆಕ್ಟ್ ಲೀಡರ್: 288
- ಪ್ರಾಜೆಕ್ಟ್ ಇಂಜಿನಿಯರ್ / PS&O ಎಕ್ಸಿಕ್ಯೂಟಿವ್: 43
- ಯೋಜನಾಧಿಕಾರಿ: 13
- ಪ್ರಾಜೆಕ್ಟ್ ಅಸಿಸ್ಟೆಂಟ್: 01
- ಕಾರ್ಪೊರೇಟ್ ಕಮ್ಯುನಿಕೇಷನ್ ಅಸೋಸಿಯೇಟ್ : 01
- ಪ್ರೊಡಕ್ಟ್ ಸರ್ವಿಸ್ ಮತ್ತು ಔಟ್‌ರೀಚ್ (PS&O) ಮ್ಯಾನೇಜರ್: 01
- ಪ್ರೊಡಕ್ಟ್ ಸರ್ವಿಸ್ ಮತ್ತು ಔಟ್‌ರೀಚ್ (PS&O) ಅಧಿಕಾರಿ: 01
- ಪ್ರಾಜೆಕ್ಟ್ ಬೆಂಬಲ ಸಿಬ್ಬಂದಿ : 14:
ವಿದ್ಯಾರ್ಹತೆ:
ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ನೇಮಕಾತಿ ಅಧಿಸೂಚನೆ ಪ್ರಕಾರ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಐಟಿಐ, ಡಿಪ್ಲೊಮಾ, ಬಿ.ಇ ಅಥವಾ ಬಿ.ಟೆಕ್, ಪದವಿ, ಸ್ನಾತಕೋತ್ತರ ಪದವಿ, ಪಿ.ಎಚ್‌ಡಿ ವಿದ್ಯಾರ್ಹತೆ ಪೂರೈಸಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ ವಯಸ್ಸಿನ 30 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 50 ವರ್ಷದೊಳಗಿರಬೇಕು.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಸಲ್ಲಿಸಬೇಕಾಗಿಲ್ಲ.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ 3,60,000 ರೂ. – 22,90,000 ರೂ. ವರೆಗೆ ವಾರ್ಷಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 16/11/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/12/2024
CDAC Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: cdac.in
ಶಾಲಾ-ಕಾಲೇಜು ಮತ್ತು ಬ್ಯಾಂಕ್ ಸೇರಿ ಡಿಸೆಂಬರ್ ನಲ್ಲಿ ಒಟ್ಟು 17 ದಿನ ರಜೆ ಇಲ್ಲಿದೆ ಸಂಪೂರ್ಣ ವಿವರ