Central Silk Board Recruitment 2024: ಕೇಂದ್ರ ರೇಷ್ಮೆ ಮಂಡಳಿ ಇಲಾಖೆ (CSB) ಖಾಲಿ ಇರುವಂತಹ ಸೈಂಟಿಸ್ಟ್ -ಬಿ ಹುದ್ದೆಗಳನ್ನು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ನೇಮಕ ಮಾಡಿಕೊಳ್ಳಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕೇಂದ್ರ ರೇಷ್ಮೆ ಮಂಡಳಿ ಇಲಾಖೆ (CSB) ಸೈಂಟಿಸ್ಟ್ – ಬಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Central Silk Board Recruitment 2024:
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ಹುದ್ದೆಗಳ ಹೆಸರು: ಸೈಂಟಿಸ್ಟ್ – ಬಿ
ಒಟ್ಟು ಹುದ್ದೆಗಳ ಸಂಖ್ಯೆ: 122
ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿಜ್ಞಾನ ಅಥವಾ ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 56,100 ರಿಂದ 1,77,500ರೂ. ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
SC/ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಇತರ ವರ್ಗಗಳ ಅಭ್ಯರ್ಥಿಗಳಿಗೆ: 1000 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಪೋಸ್ಟ್ ಮೂಲಕ.
ಇದನ್ನೂ ಓದಿ: ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2024
ಆಯ್ಕೆ ವಿಧಾನ:
ರೇಷ್ಮೆ ಮಂಡಳಿ ಇಲಾಖೆಯ ಈ ಹುದ್ದೆಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 22-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 5, 2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-09-2024
ಇದನ್ನೂ ಓದಿ: ಕೃಷಿ ಇಲಾಖೆಯಿಂದ ವಿವಿಧ ಸಬ್ಸಿಡಿ ಯೋಜನೆ ಅರ್ಜಿ ಆಹ್ವಾನ
Central Silk Board Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: csb.gov.in
ಇದನ್ನೂ ಓದಿ: ಭಾರತೀಯ ರೈಲ್ವೆ ಇಲಾಖೆಯಿಂದ 4000 ಹುದ್ದೆಗಳ ನೇಮಕಾತಿ