ಕೇಂದ್ರೀಯ ಉಗ್ರಾಣ ನಿಗಮ (ಸಿಡಬ್ಲುಸಿ) ಖಾಲಿ ಇರುವ ಮ್ಯಾನೇಜ್‌ಮೆಂಟ್ ಟ್ರೈನಿ, ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸೆಂಟ್ರಲ್ ವೇರಹೌಸಿಂಗ್ ಕಾರ್ಪೊರೇಷನ್ (CEWACOR) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
CEWACOR Recruitment 2025
ಹುದ್ದೆಗಳ ಹೆಸರು: ಮ್ಯಾನೇಜ್‌ಮೆಂಟ್ ಟ್ರೈನಿ, ಅಕೌಂಟೆಂಟ್, ಸೂಪರಿಂಟೆಂಡೆಂಟ್ ಮತ್ತು ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು: 179
ಹುದ್ದೆಗಳ ಸಂಖ್ಯೆ:
ಮ್ಯಾನೇಜ್‌ಮೆಂಟ್ ಟ್ರೈನಿ (ಜನರಲ್): 40
ಮ್ಯಾನೇಜ್‌ಮೆಂಟ್ ಟ್ರೈನಿ (ಟೆಕ್ನಿಷಿಯನ್): 13
ಅಕೌಂಟೆಂಟ್: 09
ಸೂಪರಿಂಟೆಂಡೆಂಟ್: 22
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್: 81
ಸೂಪರಿಂಟೆಂಡೆಂಟ್- (G)- SRD (NE): 02
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ SRD (NE):10
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ SRD (UT of Ladakh): 02
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಷ್ಟ್ರೇಷನ್ ಪದವಿ, ಕೃಷಿ ವಿಭಾಗದಲ್ಲಿ ಪದವಿ (ಜೂವಲಾಜಿ, ಕೆಮಿಸ್ಟ್ರಿ, ಮೈಕ್ರೋ ಬಯಲಾಜಿ, ಎಂಟಮಲಾಜಿ, ಬಯೋ ಕೆಮಿಸ್ಟ್ರಿ), ಬಿಕಾಮ್, ಬಿಎ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವೇತನ ಶ್ರೇಣಿ:
ಮ್ಯಾನೇಜ್‌ಮೆಂಟ್ ಟ್ರೈನಿ (ಜನರಲ್) ಮತ್ತು ಮ್ಯಾನೇಜ್‌ಮೆಂಟ್ ಟ್ರೈನಿ (ಟೆಕ್ನಿಷಿಯನ್) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ.
ಅಕೌಂಟೆಂಟ್, ಸೂಪರಿಂಟೆಂಡೆಂಟ್ ಮತ್ತು ಸೂಪರಿಂಟೆಂಡೆಂಟ್- (G)- SRD (NE) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 40,000 ರಿಂದ 1,40,000 ರೂ. ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ SRD (NE) ಮತ್ತು ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ SRD (UT of Ladakh) ಈ ಹುದ್ದೆಗೆ ಆಯ್ಕೆಯಾಗುವವರಿಗೆ ಮಾಸಿಕ 29,000 ರಿಂದ 93,000 ರೂ. ವೇತನ ನೀಡಲಾಗುತ್ತದೆ.
ವಯೋಮಿತಿ:
ಕೇಂದ್ರೀಯ ಉಗ್ರಾಣ ನಿಗಮ (ಸಿಡಬ್ಲುಸಿ) ಮಾನದಂಡಗಳ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 28 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷದೊಳಗೆ ಇರಬೇಕು.
ವಯೋಮಿತಿ ಸಡಿಲಿಕೆ:
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
EWS, OBC ವರ್ಗದ ಅಭ್ಯರ್ಥಿಗಳು:1,350 ರೂ.
ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು: 500 ರೂ.
ಆಯ್ಕೆ ಪ್ರಕ್ರಿಯೆ
ಆನ್‌ಲೈನ್ ಪರೀಕ್ಷೆ
ದಾಖಲೆ ಪರಿಶೀಲನೆ
ಸಂದರ್ಶನ
CEWACOR Recruitment 2025 ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ:14 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಜನವರಿ 2025
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: cewacor.nic.in
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 13735 ಹುದ್ದೆಗಳ ನೇಮಕಾತಿ
SSLC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ ತಿಂಗಳಿಗೆ 63,000 ರೂ. ವೇತನ