Char Dham Yatra Subsidy in Karnataka : ಕೇದಾರನಾಥ ಸೇರಿ ಚಾರ್‌ಧಾಮ್ ಯಾತ್ರೆ ಕೈಗೊಳ್ಳಲು ಸರ್ಕಾರದಿಂದ 20,000 ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

Char Dham Yatra Subsidy in Karnataka: ಜೀವನದಲ್ಲಿ ಒಮ್ಮೆಯಾದರೂ ಹಿಂದೂಗಳ ಪವಿತ್ರ ಸ್ಥಳಗಳಾದ ಚಾರ್‌ಧಾಮ್ ಯಾತ್ರೆಯನ್ನು ಕೈಗೊಳ್ಳಬೇಕು ಎಂಬುದು ಹಿಂದೂಗಳ ಕನಸು. ಉತ್ತರಾಖಂಡದಲ್ಲಿರುವ 4 ಪವಿತ್ರ ಹಿಂದೂ ದೇವಾಲಯಗಳಿಗೆ ಭೇಟಿ ನೀಡುವುದು ಚಾರ್‌ಧಾಮ್ ಯಾತ್ರೆ ಉದ್ದೇಶವಾಗಿದೆ.

ಚಾರ್‌ಧಾಮ್ ಯಾತ್ರೆಯಲ್ಲಿ ಪ್ರಮುಖ 4 ಸ್ಥಳಗಳಾದ ಯಮನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳಿವೆ. ಈ ದೇವಾಲಯಗಳನ್ನು ತಮ್ಮ ಜೀವಮಾನದಲ್ಲಿ ಒಮ್ಮೆಯಾದರೂ ಈ ದೇವಾಲಯಗಳನ್ನು ದರ್ಶನ ಮಾಡುವುದು ಎಲ್ಲರ ಕನಸಾಗಿರುತ್ತದೆ.

2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.20,000/- ವರಗೆ ಸರ್ಕಾರದಿಂದ (char dham yatra govt package) ಸಹಾಯಧನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Char Dham Yatra Subsidy in Karnataka

  • ಆರ್ಹತಗಳು:
  • ಯಾತಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • 45 ವರ್ಷ ಮೇಲ್ಪಟ್ಟವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
  • ಯಾತ್ರಾರ್ಥಿಗಳು ಕಡ್ಡಾಯವಾಗಿ 4 ಧಾಮಗಳಾದ ಬದರೀನಾಥ್, ಕೇದಾರ್‌ನಾಥ್, ಯಮುನೋತ್ರಿ ಮತ್ತು ಗಂಗೋತ್ರಿ ಕ್ಷೇತ್ರಗಳಿಗೆ ಭೇಟಿ ನೀಡಿರಬೇಕು.
  • ಅನುದಾನ ಲಭ್ಯತೆಗೆ ಅನುಗುಣವಾಗಿ ಸರ್ಕಾರದ ಮಾರ್ಗಸೂಚಿಯನ್ವಯ ಅನುದಾನವನ್ನು ವಿತ್ತರಿಸಲಾಗುವುದು.

ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು:

  1. ಒಂದು ಭಾವಚಿತ್ರ (ಪಾಸ್‌ಪೋರ್ಟ್ ಅಳತೆ)
  2. ಆಧಾರ್ ಕಾರ್ಡ್‌ ಎರಡೂ ಕಡೆ (both sides)
  3. ಚುನಾವಣಾ ಗುರುತಿನ ಚೀಟಿ/ರೇಷನ್ ಕಾರ್ಡ್
  4. ಯಾತ್ರಾರ್ಥಿಯು ರೂ.50/-ಗಳ ದಾಸಾ ಕಾಗದ (E-Stamp Paper) ದಲ್ಲಿ ಈ ಹಿಂದೆ ಸಹಾಯಧನವನ್ನು ಪಡೆದಿಲ್ಲವೆಂದು ಸ್ವದೃಢೀಕರಿಸಿ ನೋಟರಿ ಮೊಹರು ಮತ್ತು ಸಹಿಯೊಂದಿಗೆ ದೃಢೀಕರಣವನ್ನು ಅಪ್ ಲೋಡ್ ಮಾಡತಕ್ಕದ್ದು.
  5. ಯಾತ್ರೆ ಕೈಗೊಳ್ಳುವ ಮುನ್ನ ಯಾತ್ರೆಗೆ ನೋಂದಾಯಿಸಿಕೊಂಡ ಪ್ರತಿ
  6. ಯಾತ್ರೆ ಮುಗಿದ ನಂತರ ಉತ್ತರಖಂಡ್ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ನೀಡಲಾದ ಪ್ರಮಾಣ ಪತ್ರ.
  7. ಯಾತ್ರಾರ್ಥಿಗಳು ಅವರ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ನಂಬರ್.
  8. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಯಾತ್ರಾರ್ಥಿ ಅಪ್‌ಲೋಡ್ ಮಾಡಿರುವ ದಾಖಲೆಗಳ ಪ್ರತಿಗಳನ್ನು ಖುದ್ದಾಗಿ ಅಥವ ಅಂಚೆ ಮೂಲಕ ಕಛೇರಿಗೆ ಸಲ್ಲಿಸಬೇಕು.
Char Dham Yatra Subsidy in Karnataka

ಅರ್ಜಿಗೆ ಪ್ರಮುಖ ದಿನಾಂಕಗಳು:
chardham yatra subsidy karnataka 2024 ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ 03 ಅಕ್ಟೋಬರ್ 2024 ರಿಂದ 15 ಜನವರಿ 2025 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಯಾತ್ರಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು sevasindhuservices.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಸೂಚನೆ:- ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ tims.kar.nic.in ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಕರ್ನಾಟಕ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5000 ರೂ. ಆರ್ಥಿಕ ಸಹಾಯಧನ

ಸ್ವಯಂ ಉದ್ಯೋಗ ಪ್ರಾರಂಭಿಸಲು 1,00,000 ರೂ. ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿ 

ಹೈನುಗಾರಿಕೆ ಆರಂಭಿಸಲು ಎಮ್ಮೆ, ಆಕಳು ಖರೀದಿಸಲು ಈ ಬ್ಯಾಂಕ್ ನೀಡುತ್ತಿದೆ ರೂ.10 ಲಕ್ಷ ಸಾಲ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net