ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ | Chikkaballapur Zilla Gram Panchayat Recruitment 2024

WhatsApp Group Join Now
Telegram Group Join Now

ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಗ್ರಾಮ ಪಂಚಾಯತ್ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Chikkaballapur Zilla Gram Panchayat Recruitment 2024

Details of Vacancies
ಹುದ್ದೆಗಳ ಹೆಸರು : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು

ಉದ್ಯೋಗದ ಸ್ಥಳ : ಚಿಕ್ಕಬಳ್ಳಾಪುರ ಜಿಲ್ಲೆ (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ : 21

ಶೈಕ್ಷಣಿಕ ಅರ್ಹತೆ Qualification :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ :
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು.

  • ಸಾಮಾನ್ಯ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
  • OBC ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
  • SC/ST ಪ್ರವರ್ಗ-I ರ ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ

Chikkaballapur Zilla Gram Panchayat Recruitment ವೇತನ ಶ್ರೇಣಿ:
ಚಿಕ್ಕಬಳ್ಳಾಪುರ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಪ್ರಕಾರ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: ಗ್ರಾಮ ಪಂಚಾಯತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರು ನೇಮಕಾತಿ 2024

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು: 500 ರೂ.
  • ಒಬಿಸಿ ಅಭ್ಯರ್ಥಿಗಳು: 300 ರೂ.
  • SC & ST, ಪ್ರವರ್ಗ-I ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: 200 ರೂ.
  • ವಿಶೇಷ ಚೇತನ ಅಭ್ಯರ್ಥಿಗಳು: 100 ರೂ.

ಶುಲ್ಕ ಪಾವತಿಸುವ ವಿಧಾನ :
ಈ ಕೆಳಗೆ ನೀಡಲಾದ ಇಲಾಖೆಯ ಬ್ಯಾಂಕ್ ಖಾತೆಗೆ ಅರ್ಜಿ ಶುಲ್ಕ ಪಾವತಿಸಬೇಕು.

ಇದನ್ನೂ ಓದಿ: ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ SSLC, PUC ಪಾಸ್ ಅರ್ಜಿ ಸಲ್ಲಿಸಿ 

ಪ್ರಮುಖ ದಿನಾಂಕಗಳು ( Important Dates)
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 02/09/ 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 21, 2024

ಪ್ರಮುಖ ಲಿಂಕ್‌ಗಳು (Important links):
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: chikkaballapur.nic.in

ಇದನ್ನೂ ಓದಿ: ಅಂಚೆ ಇಲಾಖೆಯ 44,228 ಹುದ್ದೆಗಳ ಮೆರಿಟ್ ಲಿಸ್ಟ್ ಪ್ರಕಟಿಸಲಾಗಿದೆ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net