ಕರ್ನಾಟಕ ಕೃಷಿ ಇಲಾಖೆ 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ರೈತರು ಬೆಳೆ ವಿಮೆ ಅರ್ಜಿ ಸಲ್ಲಿಸಲು ನೋಂದಣಿಯನ್ನು ಪ್ರಾರಂಭಿಸಲಾಗಿದೆ.
ಏನೀದು ಯೋಜನೆ:
2024ನೇ ಸಾಲಿನ ಮುಂಗಾರು ಹಂಗಾಮಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು’ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟವಾದಲ್ಲಿ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ 14 ಕ್ಕೂ ಹೆಚ್ಚು ಬೆಳೆಗಳಿಗೆ ವಿಮೆಯನ್ನು ನೀಡಲಾಗುತ್ತದೆ.
Crop Insurance Phasal Bheema yojana:
ಅನ್ವಯಿಸುವ ಬೆಳೆಗಳ ವಿವರ:
Crop Insurance Phasal Bheema yojana ರೈತರ ಬೆಳೆಗಳಾದ ಭತ್ತ, ಮುಸುಕಿನ ಜೋಳ, ನೆಲಗಡಲೆ ( ಶೇಂಗಾ), ಹತ್ತಿ, ಈರುಳ್ಳಿ, ಆಲೂಗಡ್ಡೆ, ಟೊಮ್ಯಾಟೊ ಹಾಗೂ ಕೆಂಪು ಮೆಣಸಿನಕಾಯಿ, ಜೋಳ, ಸಾವೆ, ಉದ್ದು, ತೊಗರಿ, ಹೆಸರು ಹಾಗೂ ಸೋಯಾ,ಅವರೆ ಇತ್ಯಾದಿ ಬೆಳೆಗಳು.
ನೋಂದಣಿ ದಿನಾಂಕಗಳು:
ಮಳೆಯಾಶ್ರಿತ ಟೊಮ್ಯಾಟೋ ಮತ್ತು ಇತರ ಬೆಳೆಗಳಿಗೆ 2024 ಜುಲೈ 31ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹಾಗೂ ನೀರಾವರಿ ಹಾಗೂ ಮಳೆ ಆಶ್ರಿತ ಬೆಳೆಗಳಾದ ಕೆಂಪು ಮೆಣಸಿನಕಾಯಿ ಸೇರಿದಂತೆ ಇತರ ಬೆಳೆಗಳಿಗೆ, ಅರ್ಜಿ ಸಲ್ಲಿಸಲು ಅಗಸ್ಟ್ 16, ಕೊನೆಯ ದಿನವಾಗಿದೆ.
ಗಮನಿಸಿ:
ರೈತರು ಹೆಚ್ಚಿನ ಮಾಹಿತಿಗಾಗಿ (pm fasal bima yojana) ಬೆಂಗಳೂರಿನ ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಸ್ಥಳಿಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ, ಸ್ಥಳಿಯ ಕೃಷಿ ಇಲಾಖೆ, ಕಂದಾಯ, ಗ್ರಾಮೀಣ ಅಭಿವೃದ್ಧಿ, ಸೇವಾ ಬ್ಯಾಂಕುಗಳ ಸಿಬ್ಬಂದಿಯವರನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ:
ರೈತರು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಸಾಮಾನ್ಯ ಸೇವಾ ಕೇಂದ್ರ (Common Service Centre), ಅಥವಾ ಬ್ಯಾಂಕ್ ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆ, ಇತರೆ ದಾಖಲೆಗಳೊಂದಿಗೆ ವಿಮಾ ಅರ್ಜಿಯನ್ನು ಸಲ್ಲಿಸಬಹುದು.