ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು (SCDCC) ನಲ್ಲಿ ಪ್ರಸ್ತುತ ಖಾಲಿ ಇರುವ ದ್ವೀತಿಯ ದರ್ಜೆ ಗುಮಾಸ್ತರು ಈ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿ ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಅರ್ಜ ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು (SCDCC) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
DCC Bank Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ದ್ವಿತೀಯ ದರ್ಜೆ ಗುಮಾಸ್ತರು
ಒಟ್ಟು ಹುದ್ದೆಗಳ ಸಂಖ್ಯೆ: 123
ಉದ್ಯೋಗದ ಸ್ಥಳ: ಮಂಗಳೂರು (ಕರ್ನಾಟಕ)
ಶೈಕ್ಷಣಿಕ ಅರ್ಹತೆ:
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ಪ್ರಕಾರ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಬಿ.ಕಾಂ, ಬಿ.ಬಿ.ಎಂ. ಬಿ.ಸಿ.ಎ ಪದವಿ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ:
SCDCC ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯು: 40 ವರ್ಷ,
ಇತರೆ ಹಿಂದುಳಿದ ಜಾತಿ ಮತ್ತು ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯು: 38 ವರ್ಷ,
ಇತರೆ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯು: 35 ವರ್ಷ
ಮಾಜಿ ಸೈನಿಕರು ಸೇವೆ ಸಲ್ಲಿಸಿದ ಅವಧಿಯನ್ನು ಆಧರಿಸಿ: ಗರಿಷ್ಠ 10 ವರ್ಷ
SCDCC Bank Recruitment ವೇತನ ಶ್ರೇಣಿ:
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 24,190 ರಿಂದ 55,655 ರೂ. ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ಪ್ರಕಾರ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
SC/ ST ಅಭ್ಯರ್ಥಿಗಳಿಗೆ: 590 ರೂ.
ಇತರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 1180 ರೂ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 01/07/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 18/07/2024
DCC Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: Download
ಆನ್‌ಲೈನ್ ಅರ್ಜಿ: Apply Now