ಧಾರವಾಡ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ..
Dharwad Gram Panchayat Recruitment 2024
ಹುದ್ದೆಗಳ ಹೆಸರು: ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಉದ್ಯೋಗದ ಸ್ಥಳ: ಧಾರವಾಡ ಜಿಲ್ಲೆ
ಒಟ್ಟು ಹುದ್ದೆಗಳ ಸಂಖ್ಯೆ: 32
ಶೈಕ್ಷಣಿಕ ವಿದ್ಯಾರ್ಹತೆ:
ಧಾರವಾಡ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಹೊಂದಿರಬೇಕು ಮತ್ತು ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪಡೆದಿರಬೇಕು.
ವಯೋಮಿತಿ:
ಧಾರವಾಡ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ 18 ವರ್ಷ ಪೂರೈಸಿರಬೇಕು.
ಗರಿಷ್ಠ ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: 38 ವರ್ಷ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ-I ರ ಅಭ್ಯರ್ಥಿಗಳಿಗೆ: 40 ವರ್ಷ
Dharwad Gram Panchayat Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 16,382.52 ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು: ರೂ. 500
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ. 300
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-I ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ರೂ. 200
ವಿಕಲಚೇತನ ಅಭ್ಯರ್ಥಿಗಳು: ರೂ. 100
ಅರ್ಜಿ ಸಲ್ಲಿಕೆ ಬೇಕಾಗುವ ದಾಖಲೆಗಳು:
ಪಾಸ್ ಪೋರ್ಟ್ ಸೈಜ್ ಫೋಟೋ
ಎಸ್.ಎಸ್.ಎಲ್.ಸಿ ಅಂಕಪಟ್ಟಿ
ಪಿ.ಯು.ಸಿ ಅಂಕಪಟ್ಟಿ
ಸರ್ಟಿಫಿಕೇಶನ್ ಕೋರ್ಸ್ ಮತ್ತು ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ,
ವಾಸಸ್ಥಳ ದೃಢೀಕರಣ ಪತ್ರ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
ಕನ್ನಡ ಮಾಧ್ಯಮದ ವ್ಯಾಸಂಗ ಪ್ರಮಾಣ ಪತ್ರ
ಪ್ರಮುಖ ಲಿಂಕ್‌ಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ನವೆಂಬರ್ 05, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 04, 2024
Dharwad Gram Panchayat Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: zpdharwad.karnataka.gov.in
RTO ನೇಮಕಾತಿ 2024 ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ