ನಮಸ್ಕಾರ ಸ್ನೇಹಿತರೇ ಇವತ್ತಿನ ಈ ವರದಿ ಮೂಲಕ ತಮ್ಮಲ್ಲರಿಗೂ ತಿಳಿಸುವುದೇಂದರೆ ಕರ್ನಾಟಕ ಸರ್ಕಾರದ ವತಿಯಿಂದ ಸ್ವಾವಲಂಬಿ ಸಾರಥಿ (Swavalambi Sarathi) ಯೋಜನೆಯಡಿ ಫುಡ್ ಕಾರ್ಟ್ ಪ್ರಾರಂಭಿಸಲು (ತೆರೆಯಲು) ಸರ್ಕಾರದಿಂದ ಸಾಲ ಸೌಲಭ್ಯಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸುವುದು ಹೇಗೆ ?, ಅರ್ಜಿ ಸಲ್ಲಿಸಲು ಯಾರು ಅರ್ಹರು, ದಾಖಲೆಗಳೇನು ಸಂಪೂರ್ಣ ಮಾಹಿತಿ ಈ ಕೆಳಗಿನಂತೆ ನೀಡಲಾಗಿದೆ.
ಹೌದು ಸ್ನೇಹಿತರೇ ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿ ಸ್ವಾವಲಂಬಿ ಸಾರಥಿ ಫುಡ್ ಕಾರ್ಟ್ (Swavalambi Sarathi Food Cart Vehicle Subsidy Scheme) ವಾಹನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ :
ಸ್ವಾವಲಂಬಿತ ಸಾರಥಿ ಯೋಜನೆಯಡಿ ಫುಡ್ಕಾರ್ಟ್ ಸ್ಥಾಪಿಸಲು ಅಥವಾ ಪಡೆಯಲು ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್ಗಳ ಸಹಯೋಗದೊಂದಿಗೆ ಯೋಜನೆ ಸಾಲವನ್ನು ನೀಡಲಾಗುತ್ತದೆ.
Swavalambi Sarathi Food Cart Vehicle Subsidy Scheme ಪ್ರಯೋಜನಗಳು:
ಈ ಯೋಜನೆಯ ಮುಖಾಂತರ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಘಟಕದ ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ವರಗೆ ಸಹಾಯಧನ ಸರ್ಕಾರವೇ ಭರಿಸುತ್ತದೆ. ಹಾಗೂ ಇನ್ನುಳಿದ ಮೊತ್ತವನ್ನು ಬ್ಯಾಂಕ್ ಮೂಲಕ ಸಾಲದ ರೂಪದಲ್ಲಿ ಒದಗಿಸಲಾಗುತ್ತದೆ.
ಅರ್ಹತೆಗಳು:
ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿರಬೇಕು.
ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದ್ದು.
ಅರ್ಜಿದಾರರ ವಯಸ್ಸು 18 ರಿಂದ 50 ವರ್ಷ ಹೊಂದಿರಬೇಕು.
2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಲ್ಲಾ.
ಅರ್ಜಿ ಸಲ್ಲಿಸುವುದು ಹೇಗೆ, ಕೊನೆಯ ದಿನಾಂಕ:
Food Cart Vehicle Subsidy Scheme ಅರ್ಜಿಯನ್ನು ನಿಮ್ಮ ಹತ್ತಿರದ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ತಂತ್ರಾಂಶದ ಮೂಲಕ ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ:
ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ವೆಬ್ಸೈಟ್ https://adcl.karnataka.gov.in ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್ಸಿ, ಎಸ್ಟಿ ಸಹಾಯವಾಣಿ ಸಂಖ್ಯೆ 9482300400 ನ್ನು ಸಂಪರ್ಕಿಸಬಹುದು.
ಸೂಚನೆ:
ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆ ಇಚ್ಛಿಸಿದಲ್ಲಿ ನೇರವಾಗಿ ವೆಬ್ಸೈಟ್ ವಿಳಾಸ https://swdcorp.karnataka.gov.in/ADCLPortal ಗೆ ಭೇಟಿ ನೀಡಿ ಉದ್ದೇಶ ಬದಲಾವಣೆ ಮಾಡಬಹುದಾಗಿರುತ್ತದೆ. ಅಥವಾ ಸಂಬಂಧಿಸಿದ ಜಿಲ್ಲಾ ಕಚೇರಿಗಳಲ್ಲಿ ಮನವಿ ಪತ್ರ ಸಲ್ಲಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಹಿಳೆಯರಿಗೆ ಉಚಿತ `ಗ್ಯಾಸ್ ಸಿಲಿಂಡರ್’ ಪಡೆಯಲು ಅರ್ಜಿ ಆಹ್ವಾನ