Free Drone Pilot Training in Karnataka: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ವರ್ಗದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಏಳಿಗೆಗಾಗಿ ಸಮುದಾಯ ಆಧಾರಿತ ಉಚಿತ ತರಬೇತಿ ಯೋಜನೆಯನ್ನು ಹಮ್ಮಿಕೊಂಡಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾವೆಲ್ಲ ತರಬೇತಿ ಪಡೆಯಬಹುದು?
ಅಲ್ಪಸಂಖ್ಯಾತ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್‌ಸಿ, ಬಿಪಿಒ ಮತ್ತು ಇತರೆ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್ ಡ್ರೈವಿಂಗ್, ಡ್ರೋನ್ ಚಾಲನೆ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್ ಸೇರಿದಂತೆ ವಿವಿಧ ತರಬೇತಿಗಳನ್ನು ನಿಗಮದ ವತಿಯಿಂದ ನಿರ್ದಿಷ್ಟ ಅವಧಿಗೆ ತರಬೇತಿಯನ್ನು ನೀಡಲಾಗುತ್ತದೆ.
ಅರ್ಹತೆ ಮಾನದಂಡಗಳು:
ಕರ್ನಾಟಕದ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷದೊಳಗಿರಬೇಕು.
ಆಯ್ಕೆಯಾದವರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು.
ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಯಾವುದೇ ಯೋಜನೆಗಳಲ್ಲಿ ಉಚಿತ ತರಬೇತಿ ಪಡೆದಿರಬಾರದು.
ಡಿಸೆಂಬರ್ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Free Drone Pilot Training in Karnataka ಹೆಚ್ಚಿನ ಮಾಹಿತಿಗಾಗಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://kmdconline.krnataka.gov.in ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಬಹುದು. ಅಥವಾ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 8277944213, 08194-226412 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದ್ದಾರೆ.
ಯುವನಿಧಿ ಅರ್ಜಿದಾರರು ಈ ಕೆಲಸ ಮಾಡುವುದು ಕಡ್ಡಾಯ
ಉಚಿತ ಪತ್ರಿಕೋದ್ಯಮ ತರಬೇತಿ ಜತೆಗೆ 15,000 ರೂ. ಸ್ಟೈಫಂಡ್ ಅರ್ಜಿ ಆಹ್ವಾನ