---Advertisement---

Free Kolimari vitarane scheme : ರೈತರಿಗೆ ಉಚಿತ ಕೋಳಿ ಮರಿ ಪಡೆಯಲು ಅರ್ಜಿ ಆಹ್ವಾನ

WhatsApp Group Join Now
Telegram Group Join Now

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ ನಿಯಮಿತ ಬೆಂಗಳೂರು ಇವರಿಂದ ಹಾಗೂ ಕರ್ನಾಟಕ ಪಶುಸಂಗೋಪನೆ ಇಲಾಖೆಯಿಂದ ಉಚಿತವಾಗಿ ಕೋಳಿಮರಿಯನ್ನು (koli mari vitarane) ಪಡೆಯಲು ಅರ್ಹ ಮಹಿಳಾ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳ ನಿಯಮಿತ ಬೆಂಗಳೂರು ಇವರಿಂದ ವಿವಿಧ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಅರ್ಹ ರೈತ ಮಹಿಳೆಯರಿಗೆ ಉಚಿತ 5 ವಾರದ 20 ಹಿತ್ತಲ (ನಾಟಿ) ಕೋಳಿಮರಿಗಳನ್ನು ವಿತರಿಸಿ, ಮಹಿಳೆಯರ ಆದಾಯ ಹೆಚ್ಚಿಸುವ ಕಾರ್ಯಕ್ರಮದ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Free Kolimari vitarane scheme ಉಚಿತ ಕೋಳಿ ಮರಿ ಪಡೆಯಲು ಅರ್ಹರು:

ಈ ಯೋಜನೆಯಡಿಯಲ್ಲಿ ಎಲಯ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಕೃಷಿ ಚಟುವಟಿಯಲ್ಲಿ ತೊಡಗಿಕೊಂಡಿರುವವರು ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಈಗಾಗಲೇ ಹಿಂದಿನ ವರ್ಷದಲ್ಲಿ ಈ ಯೋಜನೆಯಡಿ ಇಲಾಖೆಯಿಂದ ಕೋಳಿ ಮರಿ ಪಡೆದಿರುವವರು ಈ ವರ್ಷ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು:
ಅರ್ಜಿದಾರರ ಆಧಾರ ಕಾರ್ಡ ಪ್ರತಿ
ಪೋಟೋ
ಬ್ಯಾಂಕ್ ಪಾಸ್ ಬುಕ್ ಪ್ರತಿ
ಮೊಬೈಲ್ ಸಂಖ್ಯೆ

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಗ್ರಾಮೀಣ ಭಾಗದಲ್ಲಿ ಕೃಷಿಯ ಜೊತೆಯಲ್ಲಿ ಕೋಳಿ ಸಾಕಾಣಿಕೆ ಮಾಡಲು ಆಸಕ್ತಿ ಇರುವ ಅರ್ಹ ರೈತ ಮಹಿಳೆಯರು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಪಶುವೈದ್ಯ ಸಂಸ್ಥೆ ಅಥವಾ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಯನ್ನು ಸಂಪರ್ಕಿಸಬಹುದು. ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.

ಯಾವೆಲ್ಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಬಹುದು?
ಪ್ರಸ್ತುತ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ವಿವಿಧ ತಾಲ್ಲೂಕುಗಳಿಂದ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದೇ ಮಾದರಿಯಲ್ಲಿ ಇತರ ಜಿಲ್ಲೆಯಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶವಿದ್ದು ಡಿಸೆಂಬರ್ 15 ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ:
ಯಾವುದೇ ರೀತಿಯ ಗೊಂದಲ ಅಥವಾ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಪಶುವೈದ್ಯಾಧಿಕಾರಿ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೇಷನ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮತ್ತೆ ಅವಕಾಶ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:
ಚಿತ್ರದುರ್ಗ: 9482943111
ಚಳ್ಳಕೆರೆ: 9448816499
ಹೊಳಲ್ಕೆರೆ: 9972965479
ಹೊದುರ್ಗ: 9945298407
ಹಿರಿಯೂರು: 9483451044
ಮೊಳಕಾಲ್ಮೂರು: 9900964820

Join WhatsApp

Join Now

Join Telegram

Join Now

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net