ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ಮಾಪನ ಮಂಡಳಿಯು (karnataka school examination and assessment board) 2024ರ SSLC ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದು ಪಾಸಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತ ಲ್ಯಾಪ್‌ಟಾಪ್ (Free Laptop) ನೀಡಲಾಗುತ್ತಿದೆ. ಲ್ಯಾಪ್‌ಟಾಪ್ ಪಡೆಯಲು ಯಾರು ಅರ್ಹರು, ಹೇಗೆ ಅರ್ಜಿ ಸಲ್ಲಿಸುವುದು ಮಾಹಿತಿ ಕೆಳಗೆ ನೀಡಲಾಗಿದೆ.
ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ ಸರ್ಕಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ಈ ವರ್ಷ ಒಟ್ಟು 3.96 ಕೋಟಿ ರೂಪಾಯಿ ವೆಚ್ಚದಲ್ಲಿ ಲ್ಯಾಪ್‌ಟಾಪ್ ಖರೀದಿಸಲು ಟೆಂಡರ್ ಆಹ್ವಾನಿಸಲಾಗಿದೆ.
Free Laptop ಏನಿದು ಯೋಜನೆ:
ಈ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರವು 2010ರಲ್ಲಿ ಪ್ರಾರಂಭಿಸಲಾಗಿತ್ತು. ಯೋಜನೆಯ ಮುಖ್ಯ ಉದ್ದೇಶ SSLC ಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತದೆ. ಈ ಯೋಜನೆಯನ್ನು 2020 ರ ನಂತರ ಸ್ಥಗಿತಗೊಳಿಸಲಾಗಿತ್ತು. ಈಗಿನ ಸಿದ್ದ ರಾಮಯ್ಯ ಸರ್ಕಾರ ಈ ಯೋಜನೆಗೆ ಮತ್ತೆ ಮರುಜೀವ ತುಂಬಲಿದೆ.
ಯಾರೆಲ್ಲ ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಹರು?
10ನೇ ತರಗತಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದವರಿಗೆ ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಹರಾಗಿರುತ್ತಾರೆ. ಇವರನ್ನು ಹೊರತುಪಡಿಸಿ ಬ್ಲಾಕ್‌ಮಟ್ಟದಲ್ಲಿ 1, 2 ಮತ್ತು 3ನೇ ಸ್ಥಾನ ಗಳಿಸಿದವರಿಗೆ ಈ ಯೋಜನೆಯ ಲಾಭ ಪಡೆಯಲು ಅರ್ಹರು.