---Advertisement---

ಯುವಕ ಯುವತಿಯರಿಗೆ ಉಚಿತ ಕೋಳಿ ಸಾಗಾಣಿಕೆ ತರಬೇತಿ | Free Poultry Farming Training Application

WhatsApp Group Join Now
Telegram Group Join Now

Free Poultry Farming Training Application: ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಯುವತಿಯರಿಗೆ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ಆಯೋಜಿಸಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಉಚಿತ ಕೋಳಿ ಸಾಕಾಣಿಕೆ (Poultry Farming) ಗೆ ಹತ್ತು ದಿನಗಳ ಉಚಿತ ತರಬೇತಿಗೆ (Free Training) ಗ್ರಾಮೀಣ ಪ್ರದೇಶದ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದು.

ತರಬೇತಿ ಪಡೆಯಲು ಆಸಕ್ತರು 18 ರಿಂದ 45 ವರ್ಷದ ಒಳಗೆ ವಯೋಮಿತಿ ಇರಬೇಕು, ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಬರೆಯಲು ಮತ್ತು ಓದಲು ಬಲ್ಲವರಾಗಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್‌ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ತರಬೇತಿಯ ಅವಧಿಯಲ್ಲಿ ಉಚಿತ ಊಟದ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 25 ಆಗಿರುತ್ತದೆ.

ತರಬೇತಿ ಸ್ಥಳ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ತುಮಕೂರು ಹಾಗೂ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ತರಬೇತಿ ನೀಡಲಾಗುತ್ತದೆ.

ಕೋಳಿ ಸಾಕಾಣಿಕೆ ತರಬೇತಿ ಪಡೆಯಲು ಆಸಕ್ತಿ ಇರುವವರು ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸಹಾಯ ವಾಣಿ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದು ಎಂಬುದಾಗಿ ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಮಾ ಯೋಜನೆಯಡಿ ನಿಮಗೆ ಸಿಗಲಿದೆ ಬರೋಬ್ಬರಿ 2,ಲಕ್ಷ ರೂ.

ಸರ್ಕಾರದಿಂದ ಮಹಿಳೆಯರಿಗೆ 2.5 ಲಕ್ಷ ಸಹಾಯಧನ ಅರ್ಜಿ ಆಹ್ವಾನ

Join WhatsApp

Join Now

Join Telegram

Join Now

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net