ನಿಮ್ಮ ಗ್ರಾಮದಲ್ಲಿ ಗ್ರಾಮ ಒನ್ ಸೇವಾ ಕೇಂದ್ರ ಫ್ರಾಂಚೈಸಿ ತೆರೆಯಲು ಅರ್ಜಿ ಆಹ್ವಾನ | Gram One Franchisee Application

WhatsApp Group Join Now
Telegram Group Join Now

ನಮಸ್ಕಾರ ಸ್ನೇಹಿತರೇ ನೀವೇನಾದರೂ ನಿಮ್ಮ ಸ್ವಂತ ಗ್ರಾಮದಲ್ಲಿ ಗ್ರಾಮ ಒನ್ ಸೇವಾ ಕೇಂದ್ರವನ್ನು ತೆರೆಯಲು ಇಚ್ಛಿಸಿದರೆ ಇಲ್ಲಿದೆ ಗುಡ್ ನ್ಯೂಸ್ ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದಡಿ ಗ್ರಾಮ ಒನ್ ಸೇವಾ ಕೇಂದ್ರ ಫ್ರಾಂಚೈಸಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಪ್ರಾರಂಭಿಸಲು ಇಚ್ಚಿಸುವವರಿಗೆ ಇಲ್ಲಿದೆ ಒಂದು ಸುವರ್ಣಾವಕಾಶ.

Gram One Franchisee Application ರಾಜ್ಯ ಸರ್ಕಾರದ ಇಡಿಸಿಎಸ್ (eDCS) ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರ (Gram One Service Center) ಗಳಿಗೆ ಫ್ರಾಂಚೈಸಿಗಳನ್ನು ನೇಮಕ (ತೆರೆಯಲು) ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

Gram One Franchisee ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಅಗತ್ಯವಿರುವ ಗ್ರಾಮ ಒನ್ ಕೇಂದ್ರಗಳು:

ಪ್ರಸ್ತುತ ಬಳ್ಳಾರಿ ಜಿಲ್ಲೆಯ 4 ಗ್ರಾಮ-ಒನ್ ಕೇಂದ್ರಗಳಿಗೆ ಫ್ರಾಂಚೈಸಿ (Gram One Service Center Franchisee)ಗಳನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ವಿವಿಧ ಗ್ರಾಮಗಳ ಪಟ್ಟಿಯು ಹೀಗಿದೆ:

  1. ಬಳ್ಳಾರಿ ತಾಲ್ಲೂಕಿನ ರೂಪನಗುಡಿ,
  2. ಕಂಪ್ಲಿ ತಾಲ್ಲೂಕಿನ ರಾಮಸಾಗರ
  3. ಸಿರುಗುಪ್ಪ ತಾಲ್ಲೂಕಿನ ಕೆ.ಸುಗೂರು
  4. ಸಿರುಗುಪ್ಪ ತಾಲ್ಲೂಕಿನ ಕೆಂಚನಗುಡ್ಡ ಗ್ರಾಮ ಪಂಚಾಯತಿಗಳು

ಗ್ರಾಮ ಒನ್ ಕೇಂದ್ರಗಳ ಅರ್ಜಿ ಸಲ್ಲಿಕೆ ವಿಧಾನ:
ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಫ್ರಾಂಚೈಸಿಯನ್ನು ಪಡೆಯಲು ಬಯಸುವವರು. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು https://kal-mys.gramaone.karnataka.gov.in/ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಆನ್‌ಲೈನ್ ಮೂಲಕ(Onlin) ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆದಾರರು ತಮ್ಮ ವಯಸ್ಸು, ಶೈಕ್ಷಣಿಕ ಅರ್ಹತೆ, ತಂತ್ರಜ್ಞಾನ ಜ್ಞಾನ ಹಾಗೂ ಪ್ರಾದೇಶಿಕ ಪರಿಚಯವನ್ನು ಹೊಂದಿರುವ ನಿರೀಕ್ಷಿತರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:
Gram One Franchisee ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15 ಆಗಿರುತ್ತದೆ. ಉಪ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಈ ಕುರಿತಂತೆ ಮಾಹಿತಿಯನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿದಾರರು ಕೊನೆಯ ದಿನಾಂಕಕ್ಕೆ ಮುನ್ನವೇ ತಮ್ಮ ಅರ್ಜಿಗಳನ್ನು ಸಲ್ಲಿಸಲು ಮನವಿ ಮಾಡಲಾಗಿದೆ, ಏಕೆಂದರೆ ನಿಗದಿತ ದಿನಾಂಕದ ನಂತರ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಹೊಸ ಜವಳಿ ಘಟಕ ಸ್ಥಾಪನೆಗೆ ಸರ್ಕಾರದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ 

ಹೊಸ ರೇಷನ ಕಾರ್ಡ್ ಗೆ ಅರ್ಜಿ ಆಹ್ವಾನ 

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net