ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಹೊಸ ಅಪ್‌ಡೇಟ್‌! | Gruhalakshmi Scheme Updates

WhatsApp Group Join Now
Telegram Group Join Now

Gruhalakshmi Scheme Updates: ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸದ್ಯ ಜಾರಿಯಲ್ಲಿವೆ. ಅದರಲ್ಲಿ ಒಂದಾದ ‘ಗೃಹಲಕ್ಷಿʼ ಯೋಜನೆಗೆ ಭರ್ತಿ ಒಂದು ವರ್ಷ. ಕಳೆದ ವರ್ಷ ನಡೆದ ಚುನಾವಣೆಗೂ ಮುನ್ನ ಕಾಂಗ್ರೆಸ್‌ ರಾಜ್ಯದ ಎಲ್ಲಾ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಮಾಡುವುದಾಗಿ ಘೋಷಿಸಿತ್ತು.

ಅದರಂತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್‌ ಸರ್ಕಾರವು ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿತ್ತು. ಇದುವರೆಗೆ ಒಟ್ಟು 25,000 ಕೋಟಿ ರೂ. ಹಣ ಗೃಹಲಕ್ಷ್ಮಿಯರ ʼಕೈʼ ಸೇರಿದೆ. ಗೃಹ ಲಕ್ಷ್ಮೀ ಯೋಜನೆಯಡಿ ರಾಜ್ಯದಾದ್ಯಂತ 1.25 ಕೋಟಿ ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ.

ಹಾಗೆಯೇ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 11 ತಿಂಗಳ ಹಣ ಮಹಿಳೆಯರ ಖಾತೆ ಜಮಾ ಮಾಡಲಾಗಿದೆ, ಬಾಕಿ ಉಳಿದಿರುವ ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಇಲಾಖೆಯಿಂದ ವಿವಿಧ ಸಬ್ಸಿಡಿ ಯೋಜನೆ ಅರ್ಜಿ ಆಹ್ವಾನ

ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ, ಹಾಗೂ ಇನ್ನೂ ಅನೇಕರಿಗೆ ಹಣ ಜಮಾ ಆಗಿಲ್ಲ. ಇದಕ್ಕಾಗಿ ತಾಂತ್ರಿಕ ದೋಷವನ್ನು ಈಗಾಗಲೇ ಸರಿ ಮಾಡಿದ್ದೇವೆ. ಜುಲೈ ಮತ್ತು ಆಗಸ್ಟ್‌ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯರೊಂದಿಗೆ ಚರ್ಚಿಸಿದ್ದೇವೆ. ಮುಂದಿನ ವಾರದೊಳಗೆ ಇನ್ನೂ ಎರಡು ತಿಂಗಳ ಹಣವನ್ನು ಮಹಿಳೆಯರ ಖಾತೆಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

Gruhalakshmi Scheme Updates ಮುಂಬರುವ ದಿನಗಳಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗೃಹಲಕ್ಷ್ಮಿ ಯೋಜನೆಯ 11 ತಿಂಗಳ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ ಉಳಿದಿರುವ, ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೂಗಲ್ ಪೇ ಮೂಲಕ 1 ಲಕ್ಷ ರೂ. ವರೆಗೆ ತ್ವರಿತ ಲೋನ್ ಪಡೆಯಿರಿ…!

WhatsApp Group Join Now
Telegram Group Join Now

Leave a Comment