HDFC Scholarship: ನಮಸ್ಕಾರ ವಿದ್ಯಾರ್ಥಿ ಮಿತ್ರರೇ, ಮತ್ತೊಂದು ಹೊಸ ಲೇಖನದಲ್ಲಿ ಸ್ವಾಗತ ಈ ಒಂದು ಲೇಖನದ ಮೂಲಕ ಸಮಸ್ತ ವಿದ್ಯಾರ್ಥಿಗಳಿಗೆ ತಿಳಿಸುವುದೇಂದರೆ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ವಿದ್ಯಾರ್ಥಿ ವೇತನವು ಅತ್ಯಂತ ಪ್ರಮುಖವಾಗಿದೆ ನೀವು ಸಹ ಸ್ಕಾಲರ್ಶಿಪ್ ಪಡೆಯಲು ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಈ ಕೆಳಗೆ ನೀಡುವ ಮಾಹಿತಿಯನ್ನು ಸಂಪೂರ್ಣ ಓದುವ ಮೂಲಕ ಸ್ಕಾಲರ್ಶಿಪ್ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಈ ಸ್ಕಾಲರ್ಶಿಪ್ ಪ್ರಯೋಜನಗಳನ್ನು?
ಈ ಒಂದು ವಿದ್ಯಾರ್ಥಿ ವೇತನವನ್ನು ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ HDFC ಬ್ಯಾಂಕ್ ನಿಂದ HDFC ಪರಿವರ್ತನ್ ವಿದ್ಯಾರ್ಥಿವೇತನವನ್ನು ಉಚಿತವಾಗಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಹಾಗೂ ಶಿಕ್ಷಣದಿಂದ ವಂಚಿತರಾಗಬಾರದೇಂಬ ಉದ್ದೇಶದಿಂದ ಈ ಯೋಜನೆಯಡಿ 75,000 ರೂ. ಸಹಾಯಧನವನ್ನು ನೀಡಲಾಗುತ್ತಿದೆ.
HDFC Scholarship
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಈ ವಿದ್ಯಾರ್ಥಿವೇತನವನ್ನು 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಡಿಪ್ಲೊಮಾ, ಪಾಲಿಟೆಕ್ನಿಕ್, ITI, UG, ಮತ್ತು PG (ಸಾಮಾನ್ಯ ಮತ್ತು ವೃತ್ತಿಪರ) ಕೋರ್ಸ್‌ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ 75,000 ರೂ ವರೆಗೆ ಸ್ಕಾಲರ್ಶಿಪ್ ನೀಡಲಾಗುತ್ತದೆ.
ವಿದ್ಯಾರ್ಥಿವೇತನದ ವಿವರಗಳು:
ಶಾಲಾ ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ಸ್ಕಾಲರ್‌ಶಿಪ್:
1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: 15,000 ರೂ.
7 ರಿಂದ 12 ನೇ ತರಗತಿ, ITI, ಡಿಪ್ಲೊಮಾ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: 18,000 ರೂ.
ಪದವಿಪೂರ್ವ ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ಪರಿವರ್ತನ್ ಸ್ಕಾಲರ್‌ಶಿಪ್:
ಸಾಮಾನ್ಯ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: 30,000 ರೂ.
ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : 50,000 ರೂ.
ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ HDFC Scholarship:
ಸಾಮಾನ್ಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ : 35,000 ರೂ.
ವೃತ್ತಿಪರ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: 75,000 ರೂ.
ಅರ್ಹತೆಗಳು :
ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ.ಮೀರಿರಬಾರದು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
- ಪಾಸ್ ಪೋರ್ಟ್ ಸೈಜ್ ಫೋಟೋ
- ಆದಾಯ ಪ್ರಮಾಣ ಪತ್ರ
- ಅರ್ಜಿದಾರರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ವಿದ್ಯಾರ್ಥಿಗಳ ಹಿಂದಿನ ವರ್ಷದ ಅಂಕಪಟ್ಟಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-Dec-2024
ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
- ಇನ್ಫೋಸಿಸ್ ಫೌಂಡೇಶನ್ ವತಿಯಿಂದ 1 ಲಕ್ಷ ರೂ. ಸ್ಕಾಲರ್ಶಿಪ್
- PUC ಪಾಸಾದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ 20,000 ರೂ. ಸ್ಕಾಲರ್‌ಶಿಪ್