ಪದವಿ ಪಾಸಾಗಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಡಿಗ್ರಿ ಮುಗಿಸಿ ಐಎಎಸ್, ಕೆಎಎಸ್ ನಾಗರೀಕ ಸೇವೆಗಳ ಪರೀಕ್ಷೆಗಳನ್ನು ಬರೆಯಲು ಆಸಕ್ತರಿದರೆ ಕರ್ನಾಟಕ ಸರ್ಕಾರದ ವತಿಯಿಂದ ಉಚಿತ ಕೋಚಿಂಗ್ ಜೊತೆಗೆ ಊಟ ವಸತಿಯನ್ನು ಒದಗಿಸಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾರು ಅರ್ಹರು ಹೇಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಕೆಳಗೆ ನೀಡಲಾಗಿದೆ.
2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕರ್ನಾಟಕ ಹಜ್ ಭವನ, ಬೆಂಗಳೂರಿನಲ್ಲಿ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ಜೊತೆಗೆ ವಸತಿ ಸಹಿತ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
IAS KAS Exam Free Coaching:
ಅರ್ಜಿ ಸಲ್ಲಿಸಲು ಯಾರು ಅರ್ಹರು:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜೈನ್, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಕ್ಕೆ ಸೇರಿರಬೇಕು.
ಅರ್ಹತಾ ಮಾನದಂಡಗಳು:
ಅರ್ಜಿದಾರರು ಕರ್ನಾಟಕ ರಾಜ್ಯದ ನೆಲಸಿರಬೇಕು.
ಅಲ್ಪಸಂಖ್ಯಾತರ ಸಮುದಾಯದವರು ( ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಆಗಿರಬೇಕು.
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಅರ್ಜಿದಾರರ ವಯೋಮಿತಿ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷಗಳು ಮೀರಿರಬಾರದು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು ಅರ್ಹರಲ್ಲ.
ಸಲ್ಲಿಸಲು ಪ್ರಮುಖ ದಾಖಲೆಗಳು:
ಆಧಾರ್ ಕಾರ್ಡ್
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ರೇಷನ ಕಾರ್ಡ್
ಆದಾಯ ಪ್ರಮಾಣ ಪತ್ರ
ಅಲ್ಪಸಂಖ್ಯಾತರ ಸಮುದಾಯದ ಪ್ರಮಾಣ ಪತ್ರಗಳು,
ಪ್ರಮುಖ ದಿನಾಂಕಗಳು:
ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 24-07-2024
ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ: 31-08-2024
IAS KAS Exam Free Coaching ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: sevasindhu.karnataka.gov.in, dom.karnataka.gov.in
ಗಮನಿಸಿ: ಅಭ್ಯರ್ಥಿಗಳು ಈಗಾಗಲೇ ಖಾಸಗಿ ತರಬೇತಿ ಸಂಸ್ಥೆಗಳಲ್ಲಿ ಐಎಎಸ್, ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ಪಡೆಯುತ್ತಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಬೇಕಾದಲ್ಲಿ ಕಲ್ಪಿಸಿಕೊಡುವ ಅವಕಾಶವು ಇರುತ್ತದೆ. ಈ ಸೌಲಭ್ಯ ಬೇಕಾದಲ್ಲಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990