ಭಾರತೀಯ ಅಂಚೆ ಇಲಾಖೆ ನೇಮಕಾತಿ 1,42,400 ರೂ. ವೇತನ | India Post Recruitment 2024 

WhatsApp Group Join Now
Telegram Group Join Now

ಭಾರತೀಯ ಅಂಚೆ ಇಲಾಖೆ (Indian Postal Department) ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ಭಾರತೀಯ ಅಂಚೆ ಇಲಾಖೆ (India Post) ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

India Post Recruitment 2024 

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಇಂಜಿನಿಯರ್

ಒಟ್ಟು ಹುದ್ದೆಗಳ ಸಂಖ್ಯೆ: 07

ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ವಿದ್ಯಾಸಂಸ್ಥೆಯಿಂದ ಡಿಪ್ಲೊಮಾ, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪೂರೈಸಿರಬೇಕು.

ವೇತನ ಶ್ರೇಣಿ:
ಇಂಡಿಯನ್ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆ ಪ್ರಕಾರ ಅಸಿಸ್ಟೆಂಟ್ ಇಂಜಿನಿಯರ್‌ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 44,900 ರಿಂದ 1,42,400 ಪ್ರತಿ ತಿಂಗಳು ವೇತನವನ್ನು ಪಡೆಯಬಹುದು.

ಅರ್ಜಿ ಶುಲ್ಕ :
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಹರು ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ನೀತಿಯನ್ನು 56 ವರ್ಷಕ್ಕೆ ನಿಗದಿಪಡಿಸಲಾಗಿದೆ.

India Post Recruitment 2024 ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇಮಕಾತಿಯಲ್ಲಿ ನೀಡಿರುವ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ದಾಖಲೆಗಳು, ಅನುಭವ & ಇನ್ನಿತರ ಮಾಹಿತಿಯನ್ನು ಲಗತ್ತಿಸಿ ದಿನಾಂಕ 10 ನವೆಂಬರ್ 2024 ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕೆಳಗೆ ವಿಳಾಸಕ್ಕೆ ಕಳುಹಿಸಬೇಕು.

Chief Engineer-I,
Department of Posts (Civil Wing),
4th Floor, Dak Bhawan,
New Delhi-110001

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 26/09/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/11/2024

India Post Recruitment 2024 ಪ್ರಮುಖ ಲಿಂಕುಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: indiapost.gov.in

ಇದನ್ನೂ ಓದಿ:
ಅದಾನಿ ಜ್ಞಾನ ಜ್ಯೋತಿ ಗ್ರೂಪ್ ವತಿಯಿಂದ ಬರೋಬ್ಬರಿ 1,8 ಲಕ್ಷ ವಿದ್ಯಾರ್ಥಿವೇತನ

ರಿಲಯನ್ಸ್‌ ಫೌಂಡೇಶನ್‌ ವತಿಯಿಂದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ವಿದ್ಯಾರ್ಥಿವೇತನ

Leave a Comment