ಭಾರತೀಯ ಅಂಚೆ ಇಲಾಖೆ (India Postal Department) ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ (Staff Car Driver) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.
ಭಾರತೀಯ ಅಂಚೆ ಇಲಾಖೆ (India Post Recruitment 2025) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 19
ಹುದ್ದೆಗಳ ಹೆಸರು: ಸ್ಟಾಫ್ ಕಾರ್ ಡ್ರೈವರ್
India Post Recruitment 2025 ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ (SSLC) ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 27 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ವೇತನ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಮಾನದಂಡಗಳ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900-63,200 ರೂ. ರವರೆಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಟ್ರೇಡ್ ಟೆಸ್ಟ್
ಡ್ರೈವಿಂಗ್ ಟೆಸ್ಟ್
ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಅಸಿಸ್ಟೆಂಟ್ ಡೈರೆಕ್ಟರ್ (ನೇಮಕಾತಿ)
ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ
ಬಿಹಾರ ಸರ್ಕಲ್
ಪಾಟ್ನಾ-800001
India Post Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 14/12/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 12, 2025
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: indiapost.gov.in
ರೂರಲ್ ಎಲೆಕ್ಟ್ರಿಫಿಕೇಷನ್ ಕಾರ್ಪೋರೇಷನ್ ಇಂಡಿಯಾ ನೇಮಕಾತಿ 2024
ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ನೇಮಕಾತಿ