ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ನ್ಯೂಸ್, (India Post Recruitment 2025) ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 21,413 ಗ್ರಾಮೀಣ ಡಕ್ ಸೇವಕ್ (Gramin Dak Sevak) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸಾದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಕ್ ಸೇವಕ್, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
India Post Recruitment 2025
ಹುದ್ದೆಗಳ ಹೆಸರು: ಗ್ರಾಮೀಣ ಡಕ್ ಸೇವಕ್
ಒಟ್ಟು ಹುದ್ದೆಗಳ ಸಂಖ್ಯೆ: 21,413
ಉದ್ಯೋಗ ಸ್ಥಳ: ಕರ್ನಾಟಕ ಸೇರಿದಂತೆ (ಭಾರತದಾದ್ಯಂತ)
ಹುದ್ದೆಗಳ ವಿವರ:
ಗ್ರಾಮೀಣ ಡಕ್ ಸೇವಕ್ (ಬ್ರ್ಯಾಂಚ್ ಪೋಸ್ಟ್ಮಾಸ್ಟರ್)
ಗ್ರಾಮೀಣ ಡಕ್ ಸೇವಕ್ (ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ಮಾಸ್ಟರ್/ಡಕ್ ಸೇವಕ್)
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ವಿಶ್ವವಿದ್ಯಾನಿಲಯದಿಂದ 10ನೇ ತರಗತಿ (SSLC) ಪಾಸಾಗಿರಬೇಕು, ಜೊತೆಗೆ ಕಂಪ್ಯೂಟ್ ಜ್ಞಾನ ಹೊಂದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸುವವರ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯಸ್ಸು 40 ವರ್ಷದೊಳಗೆ ಇರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷ
ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ:
ಉಳಿದೆಲ್ಲ ಅಭ್ಯರ್ಥಿಗಳು: 100 ರೂ.
ಎಸ್ಸಿ/ಎಸ್ಟಿ/ಪಿಡಬ್ಲ್ಯುಡಿ/ಮಹಿಳಾ/ತೃತೀಯ ಲಿಂಗಿ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಆಯ್ಕೆ ವಿಧಾನ:
ಈ ಅಧಿಸೂಚನೆ ಪ್ರಕಾರ ಮೆರಿಟ್ ಲಿಸ್ಟ್, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಮಾಸಿಕ ವೇತನ:
ಗ್ರಾಮೀಣ ಡಕ್ ಸೇವಕ್ (ಬ್ರ್ಯಾಂಚ್ ಪೋಸ್ಟ್ಮಾಸ್ಟರ್) ಹುದ್ದೆಗೆ: 12,000 ರೂ. – 29,380 ರೂ.
ಗ್ರಾಮೀಣ ಡಕ್ ಸೇವಕ್ (ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ಮಾಸ್ಟರ್/ಡಕ್ ಸೇವಕ್) ಹುದ್ದೆಗೆ: 10,000 ರೂ.-24,470 ರೂ. ಮಾಸಿಕ ವೇತನ ನೀಡಲಾಗುತ್ತದೆ.
ಈ ಸುದ್ದಿಯನ್ನೂ ಓದಿ: ಫೀಲ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
India Post Recruitment 2025 ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಫೆಬ್ರವರಿ 10, 2025
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 03, 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ವಿಳಾಸ: indiapostgdsonline.gov.in
ಈ ಸುದ್ದಿಯನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಕಾಶ ಶೀಘ್ರವೇ ಅರ್ಜಿ ಸಲ್ಲಿಸಿ