ಭಾರತೀಯ ಸೇನಾ ಪಡೆಯಲ್ಲಿ ಲೆಫ್ಟಿನೆಂಟ್ ಹುದ್ದೆಗಳ ನೇಮಕಾತಿ | Indian Army Recruitment 2024 SSC Technical Officer

WhatsApp Group Join Now
Telegram Group Join Now

ಭಾರತೀಯ ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಭಾರತೀಯ ಸೇನಾಪಡೆಯಲ್ಲಿ ಖಾಲಿ ಇರುವ ಶಾರ್ಟ್ ಸರ್ವಿಸ್ ಕಮಿಷನ್ ಲೆಫ್ಟಿನೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಇಬ್ಬರೂ ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ಸೇನಾಪಡೆಯಲ್ಲಿ ಖಾಲಿ ಇರುವ ಶಾರ್ಟ್ ಸರ್ವಿಸ್ ಕಮಿಷನ್ ಲೆಫ್ಟಿನೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.

Indian Army Recruitment 2024 SSC Technical Officer ಸಂಕ್ಷಿಪ್ತ ವಿವರ:

ಒಟ್ಟು ಹುದ್ದೆಗಳ ಸಂಖ್ಯೆ: 381

ಹುದ್ದೆಗಳ ಹೆಸರು: ಶಾರ್ಟ್ ಸರ್ವಿಸ್ ಕಮಿಷನ್ (SSC Technical Officer) ಲೆಫ್ಟಿನೆಂಟ್

ಹುದ್ದೆಗಳ ಮಾಹಿತಿ:
ಎಸ್ ಎಸ್ ಸಿ ಟೆಕ್ ಪುರುಷ ಅಭ್ಯರ್ಥಿಗಳಿಗೆ: 350
ಎಸ್ ಎಸ್ ಸಿ ಟೆಕ್ ಮಹಿಳಾ ಅಭ್ಯರ್ಥಿಗಳಿಗೆ: 29
SSCW Tech: 01
SSCW Non- Tech: 01

ವಿದ್ಯಾರ್ಹತೆ Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಲ್ಲಿ ಸಂಬಂಧಪಟ್ಟ ವಿಷಯದಲ್ಲಿ ಪದವಿ, ಇಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.

ವಯಸ್ಸಿನ ಮಿತಿ (Age limit):
ಈ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 20 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 27 ವರ್ಷದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Indian Army Recruitment 2024 SSC Technical Officer ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 56,100 ರಿಂದ 1,77,500 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಮುಖ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಆದಾಯ ಮತ್ತು ಜಾತಿ ಪ್ರಮಾಣ ಪತ್ರ
  • 10ನೇ ಮತ್ತು 12ನೇ ತರಗತಿಯ ಅಂಕಪಟ್ಟಿ
  • ಇಂಜಿನಿಯರಿಂಗ್ ಪದವಿ ಪ್ರಮಾಣ ಪತ್ರ
  • ಅರ್ಜಿದಾರರ ಫೋಟೋ
  • ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ
  • ನಿಮ್ಮ ಕೈ ಬರಹ(ಸಿಗ್ನೇಚರ್)

ಆಯ್ಕೆ ಪ್ರಕ್ರಿಯೆ:

  1. ಅರ್ಜಿಗಳ ಶಾರ್ಟ್ ಲಿಸ್ಟ್
  2. SSB ಸಂದರ್ಶನ
  3. ದಾಖಲೆಗಳ ಪರಿಶೀಲನೆ
  4. ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 16-07-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2024

Indian Army Recruitment 2024 SSC Technical Officer ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: joinindianarmy.nic.in

  1. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2024
  2. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆಗಳ ನೇಮಕಾತಿ
  3. ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು 30,ಸಾವಿರ ರೂ.

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net