ಭಾರತೀಯ ಸೇನೆಯ (Indian Army Recruitment 2025) ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್(DGEME) ನಲ್ಲಿ ಖಾಲಿ ಇರುವ ಗ್ರೂಪ್-C (Group C Posts) ವೃಂದದ ಫಾರ್ಮಸಿಸ್ಟ್, ಲೋವರ್ ಡಿವಿಶನ್ ಕ್ಲಾರ್ಕ್, ಫೈರ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್ ನೇಮಕಾತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 625
ಹುದ್ದೆಗಳ ಹೆಸರು: ಲೋವರ್ ಡಿವಿಶನ್ ಕ್ಲಾರ್ಕ್, ಫೈರ್ ಮ್ಯಾನ್
ಉದ್ಯೋಗದ ಸ್ಥಳ: ಭಾರತಾದ್ಯಂತ
Indian Army Recruitment 2025 ಹುದ್ದೆಗಳ ಸಂಖ್ಯೆ:
ಫಾರ್ಮಾಸಿಸ್ಟ್ : 01
ಲೋವರ್ ಡಿವಿಷನ್ ಕ್ಲರ್ಕ್ (LDC) : 56
ಎಲೆಕ್ಟ್ರಿಷಿಯನ್ ಹೈಲಿ ಸ್ಕಿಲ್ಡ್-II : 32
ಅಗ್ನಿಶಾಮಕ ಸಿಬ್ಬಂದಿ : 36
ಟ್ರೇಡ್ಸ್‌ಮ್ಯಾನ್ ಮೇಟ್ : 230
ವೆಹಿಕಲ್ ಮೆಕ್ಯಾನಿಕ್ : 100
ಫಿಟ್ಟರ್ (ನುರಿತ) : 50
ವಿದ್ಯಾರ್ಹತೆ:
ಅರ್ಜಿದಾರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10ನೇ ತರಗತಿ, ದ್ವೀತಿಯ ಪಿಯುಸಿ, ಐಟಿಐ, B.Sc, ಡಿಪ್ಲೋಮ, ಪದವಿ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ:
ಭಾರತೀಯ ಸೇನಾಪಡೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 30 ವರ್ಷದೊಳಗಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ (NCL) ಅಭ್ಯರ್ಥಿಗಳಿಗೆ: 03 ವರ್ಷ
ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ: 05 ವರ್ಷ
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
ಅಂಗವಿಕಲ (ಒಬಿಸಿ ) ಅಭ್ಯರ್ಥಿಗಳಿಗೆ: 13 ವರ್ಷ
ಅಂಗವಿಕಲ (ಎಸ್ಸಿ-ಎಸ್ಟಿ) ಅಭ್ಯರ್ಥಿಗಳಿಗೆ: 15 ವರ್ಷಗಳ
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Indian Army Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 21 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ಜನವರಿ 2025
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ ಓದಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: joinindianarmy.nic.in
ಇದನ್ನೂ ಓದಿ: SSLC, PUC ಪಾಸಾದವರಿಗೆ NALCO ದಲ್ಲಿ ಉದ್ಯೋಗಾವಕಾಶ
ಇದನ್ನೂ ಓದಿ: ಕೆನರಾ ಬ್ಯಾಂಕ್ ಹೊಸ ನೇಮಕಾತಿ 2025