10th, 12th ಪಾಸಾದವರಿಗೆ ಭಾರತೀಯ ಕರಾವಳಿ ಪಡೆಯಲ್ಲಿ ಉದ್ಯೋಗಾವಕಾಶ : Indian Coast Guard Recruitment 2025

WhatsApp Group Join Now
Telegram Group Join Now

ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard Recruitment 2025) ಖಾಲಿ ಇರುವ ನಾವಿಕ (ಸಾಮಾನ್ಯ ಕರ್ತವ್ಯ ಮತ್ತು ದೇಶೀಯ ಶಾಖೆ) ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಭಾರತೀಯ ಕರಾವಳಿ ರಕ್ಷಣಾ ಪಡೆ (ICG) ನಾವಿಕ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Indian Coast Guard Recruitment 2025

ಹುದ್ದೆಗಳ ಹೆಸರು: ನಾವಿಕ (ಸಾಮಾನ್ಯ ಡ್ಯೂಟಿ)

ಒಟ್ಟು ಹುದ್ದೆಗಳ ಸಂಖ್ಯೆ: 300

ಕೆಲಸದ ಸ್ಥಳ: ಕರ್ನಾಟಕ ಸೇರಿದಂತೆ ಭಾರತದಾದ್ಯಂತ.

ಹುದ್ದೆಗಳು
ನಾವಿಕ (ಸಾಮಾನ್ಯ ಕರ್ತವ್ಯ): 260 ಹುದ್ದೆಗಳು
ನಾವಿಕ (ದೇಶೀಯ ಶಾಖೆ): 40 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ನಾವಿಕ (ಜನರಲ್ ಡ್ಯೂಟಿ ) ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ನಾವಿಕ (ಡೊಮೆಸ್ಟಿಕ್ ಬ್ರಾಂಚ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ತರಗತಿ (SSLC) ಉತ್ತೀರ್ಣರಾಗಿರಬೇಕು.

Indian Coast Guard Recruitment 2025 ವಯೋಮಿತಿ:
ಭಾರತೀಯ ಕರಾವಳಿ ರಕ್ಷಣಾ ಪಡೆ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಆಗಿರಬೇಕು ಹಾಗೂ ಗರಿಷ್ಠ 22 ವರ್ಷದೊಳಗೆ ಇರಬೇಕು.

ವಯೋಮಿತಿ ಸಡಿಲಿಕೆ:
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು: 300 ರೂ.
ಎಸ್‌ಸಿ/ಎಸ್‌ಟಿ ವರ್ಗದ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ ಇರುತ್ತದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್‌ನಲ್ಲಿ ನೆಟ್ ಬ್ಯಾಂಕಿಂಗ್, ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಬಹುದು.

ವೇತನ ಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳ ಅಧಿಸೂಚನೆ ಪ್ರಕಾರ ಪ್ರತಿ ತಿಂಗಳು 21,700 ರೂ. ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಏನು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು 3 ಹಂತಗಳಲ್ಲಿ ನಡೆಯುತ್ತದೆ. ಮೊದಲ ಹಂತ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ, ಎರಡನೇ ಹಂತದಲ್ಲಿ ದೈಹಿಕ ಸದೃಢತಾ ಪರೀಕ್ಷೆ, ಇದಾದ ನಂತರ, ಮೂರನೇ ಹಂತದಲ್ಲಿ, ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಯುತ್ತದೆ.

ಈ ಸುದ್ದಿಯನ್ನೂ ಓದಿ: ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ 6ನೇ ತರಗತಿಗೆ ಉಚಿತ ಪ್ರವೇಶ: ಅರ್ಜಿ ಆಹ್ವಾನ 

Indian Coast Guard Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಫೆಬ್ರವರಿ 11, 2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ಫೆಬ್ರವರಿ 25, 2025

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ joinindiancoastguard.cdac.in

ಈ ಸುದ್ದಿಯನ್ನೂ ಓದಿ: SSLC, PUC ಪಾಸಾದವರಿಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್‌ ನಲ್ಲಿ ಉದ್ಯೋಗ

Leave a Comment