ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (Indian Oil Recruitment 2025) ನಲ್ಲಿ ಖಾಲಿ ಇರುವ ಜೂನಿಯರ್ ಆಪರೇಟರ್, ಜೂನಿಯರ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (IOCL) ಜೂನಿಯರ್ ಆಪರೇಟರ್, ಜೂನಿಯರ್ ಅಟೆಂಡೆಂಟ್, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Indian Oil Recruitment 2025
ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್)
ಹುದ್ದೆಗಳ ಹೆಸರು: ಜೂನಿಯರ್ ಆಪರೇಟರ್, ಜೂನಿಯರ್ ಅಟೆಂಡೆಂಟ್
ಒಟ್ಟು ಹುದ್ದೆಗಳ ಸಂಖ್ಯೆ: 246
ವಿದ್ಯಾರ್ಹತೆ:
ಜೂನಿಯರ್ ಆಪರೇಟರ್ ವಿಭಾಗದಲ್ಲಿ ಒಟ್ಟು 215 ಹುದ್ದೆಗಳು ಇದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ವಿದ್ಯಾಸಂಸ್ಥೆಯಿಂದ 10ನೇ ತರಗತಿ (SSLC), ಐಟಿಐ ನಲ್ಲಿ ಉತ್ತೀರ್ಣರಾಗಿಬೇಕು.
ಜೂನಿಯರ್ ಅಟೆಂಡೆಂಟ್ ವಿಭಾಗದಲ್ಲಿ 23 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (PUC) ಪಾಸಾಗಿರಬೇಕು.
ಜೂನಿಯರ್ ಬ್ಯುಸಿನೆಸ್ ಅಸಿಸ್ಟಂಟ್ ವಿಭಾಗದಲ್ಲಿ ಕೇವಲ 8 ಹುದ್ದೆಗಳು ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸು 26 ವರ್ಷದೊಳಗೆ ಇರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ: 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: 300 ರೂ.
ಎಸ್‌ಸಿ.ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಯೋಧರು: ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ, ಕೌಶಲ್ಯ/ಫಿಸಿಕಲ್ ಪರೀಕ್ಷೆ/ಕಂಪ್ಯೂಟರ್ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Indian Oil Recruitment 2025 ವೇತನಶ್ರೇಣಿ:
ಜೂನಿಯರ್ ಆಪರೇಟರ್ ಮತ್ತು ಜೂನಿಯರ್ ಅಟೆಂಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 23,000 ರಿಂದ 78,000 ರೂ., ಹಾಗೂ ಜೂನಿಯರ್ ಬ್ಯುಸಿನೆಸ್ ಅಸಿಸ್ಟಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 25,000 ರಿಂದ 1,0,5000 ರೂ. ವರೆಗೆ ಗರಿಷ್ಠ ವೇತನವನ್ನು ನೀಡಲಾಗುತ್ತದೆ.
ಈ ಸುದ್ದಿಯನ್ನೂ ಓದಿ: ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Indian Oil Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಫೆಬ್ರುವರಿ 03, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 23, 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್: iocl.com
ಈ ಸುದ್ದಿಯನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿಗೆ ಅರ್ಜಿ ಆಹ್ವಾನ