ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಮೇಲ್ ಸರ್ವಿಸ್ ಗ್ರೂಪ್ ‘ಸಿ’ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಂಚೆ ಇಲಾಖೆಯ Mail Motor Service, Chennai ನಲ್ಲಿ ಖಾಲಿ ಇರುವ “ಗ್ರೂಪ್ ಸಿ” ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Indian Post MMS Recruitment 2024
ಹುದ್ದೆಗಳ ಹೆಸರು: ಗ್ರೂಪ್ ಸಿ
ಒಟ್ಟು ಹುದ್ದೆಗಳ ಸಂಖ್ಯೆ: 10
ಹುದ್ದೆಗಳ ಮಾಹಿತಿ:
M.V ಮೆಕ್ಯಾನಿಕ್: 04
M.V ಎಲೆಕ್ಟ್ರಿಷಿಯನ್: 01
ಟೈರ್ ಮನ್ (Tyreman): 01
ಬ್ಲಾಕ್ ಸ್ಮಿತ್ (Blacksmith): 01
ಕಾರ್ಪೆಂಟರ್ (Carpenter): 01
ವಿದ್ಯಾರ್ಹತೆ Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿ ಪಾಸ್ ಹಾಗೂ ಐಟಿಐ ಪಾಸಾಗಿರಬೇಕು.
ವೇತನ ಶ್ರೇಣಿ:
ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 19,900 ರಿಂದ 63,200 ರೂ. ವೇತನ ನೀಡಲಾಗುತ್ತದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಿದ್ರೆ ಸಾಕು 10 ಲಕ್ಷ ರೂ. ರಿಟರ್ನ್ ಸಿಗುತ್ತೆ!
ವಯೋಮಿತಿ (Age Limit):
ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಟ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ : 05 ವರ್ಷ
ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ (OBC): 03 ವರ್ಷ
ಅಂಗವಿಕಲ (PWD) ಅಭ್ಯರ್ಥಿಗಳಿಗೆ: 10 ವರ್ಷ
Indian Post MMS Recruitment 2024 ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 100 ರೂ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ಕೌಶಲ್ಯ ಪರೀಕ್ಷೆ
ಇದನ್ನೂ ಓದಿ: PUC ಪಾಸಾದ ವಿದ್ಯಾರ್ಥಿಗಳಿಗೆ ಕೋಟಕ್ ಮಹೀಂದ್ರಾ ಬ್ಯಾಂಕ್ ವತಿಯಿಂದ 1.5 ಲಕ್ಷ ವಿದ್ಯಾರ್ಥಿವೇತನ
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಅರ್ಜಿ ನಮೂನೆ ಭರ್ತಿ ಮಾಡಿ ದಿನಾಂಕ 30-08-2024 ರೊಳಗೆ ಅಗತ್ಯ ದಾಖಲೆಗಳೊಂದಿಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
Senior Manager, Mail Motor Service,
No. 37, Greams Road, Chennai- 600006
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/08/2024
Indian Post MMS Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: Indiapost.gov.in
ಇದನ್ನೂ ಓದಿ: ಬಡ ಕುಟುಂಬಗಳಿಗೆ ಉಚಿತ ಮನೆ ಭಾಗ್ಯ ಸರ್ಕಾರದಿಂದ ಗುಡ್ ನ್ಯೂಸ್